ಮೈಸೂರು: ‘ಮಾದಿಗ ಸಮುದಾಯ ಹಲವು ವರ್ಷಗಳಿಂದ ಒಳಮೀಸಲಾತಿಯನ್ನು ಕೇಳುತ್ತಾ ಬಂದಿದ್ದು, ಇದೀಗ ರಾಜ್ಯ ಸರ್ಕಾರ ನಾಗಮೋಹನದಾಸ್ ಆಯೋಗದ ವರದಿ ಅನುಸಾರ ಹಂಚಿಕೆ ಮಾಡಿರುವ ಒಳಮೀಸಲಾತಿಯನ್ನು ಒಪ್ಪಿಕೊಂಡು ಸಹೋದರರಂತೆ ಸಹಬಾಳ್ವೆಯಿಂದ ಒಗ್ಗಟ್ಟು ಕಾಯ್ದುಕೊಳ್ಳಲು ಎರಡೂ ಸಮುದಾಯ ಮುಂದಾಗಬೇಕು’ ಎಂದು ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಮನವಿ ಮಾಡಿದರು.

ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘2004ರಿಂದ ಅನೇಕ ಪ್ರಯತ್ನ ನಡೆದರೂ ಈಗ ಒಳಮೀಸಲಾತಿ ಜಾರಿಯಾಗಿದೆ. ಒಳಮೀಸಲಾತಿ ವಿಚಾರದಲ್ಲಿ ಮಾದಿಗ, ಹೊಲೆಯ ಸಮುದಾಯಗಳ ವೈಮನಸ್ಸನ್ನು ಬಿಟ್ಟು, ಹಂಚಿಕೆಯಾಗಿರುವ ಒಳಮೀಸಲಾತಿಯನ್ನು ಸೌಹಾರ್ದಯುತವಾಗಿ ಒಪ್ಪಿಕೊಳ್ಳಬೇಕು. ಡಾ. ಅಂಬೇಡ್ಕರ್ ಅವರು ಹಸಿದವರಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ. ಈ ಮಾತಿನಂತೆ ಒಳಮೀಸಲಾತಿ ಒಪ್ಪಿಕೊಳ್ಳಬೇಕು’ ಎಂದರು.

‘ಈಗಾಗಲೇ ದಲಿತ ಸಿಎಂ ವಿಚಾರ ಪ್ರಸ್ತಾಪವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಒಳಮೀಸಲಾಯಿತಿಯನ್ನು ಮುಂದಿಟ್ಟುಕೊಂಡು ದಲಿತರಲ್ಲಿ ಒಗ್ಗಟ್ಟು ಇಲ್ಲದಂತೆ ಮಾಡಿಕೊಳ್ಳುವುದು ಸೂಕ್ತವಲ್ಲ. ಆ ಕಾರಣದಿಂದ ಎರಡೂ ಸಮುದಾಯದ ಮುಖಂಡರು ಒಳಮೀಸಲಾತಿಗೆ ಒಪ್ಪಿಗೆ ಸೂಚಿಸಿ ಒಂದಾಗಿ ಒಗ್ಗಟ್ಟು ಕಾಯ್ದುಕೊಳ್ಳಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.

ಮಾಜಿ ಉಪಮೇಯರ್ ಶ್ರೀಧರ್, ಮುಖಂಡರಾದ ಪ್ರೊ. ವೆಂಕಟೇಶ್ ಕುಮಾರ್, ರಮೇಶ್, ರಂಗನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-39-1566866195

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.