ಮೈಸೂರು: ಇಲ್ಲಿನ ಬನ್ನಿಮಂಟಪದಲ್ಲಿ ಮನೆ ಮಹಡಿಯಿಂದ ಒಳನುಗ್ಗಿದ ಕಳ್ಳರು, ಬೀರುವಿನಲ್ಲಿದ್ದ 14 ಗ್ರಾಂ ಚಿನ್ನಾಭರಣ ದೋಚಿದ್ದಾರೆ.

ನಾತೀಹಾ ಖಾನಂ ಚಿನ್ನ ಕಳೆದುಕೊಂಡವರು. ಏ.27ರಂದು ಕುಟುಂಬ ಸಮೇತ ಸಂಬಂಧಿಕರ ಮನೆಗೆ ತೆರಳಿದ್ದ ಅವರು, ಮೇ 1ರಂದು ಮನೆಗೆ ವಾಪಸ್ ಬಂದಾಗ ಚಿನ್ನಾಭರಣ ಕಳ್ಳತನವಾಗಿರುವುದು ಗೊತ್ತಾಗಿದೆ.

ಎನ್ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ತಾಲ್ಲೂಕಿನ ವಾಜಮಂಗಲ ಗ್ರಾಮದ ಮಾವಿನ ತೋಟದಲ್ಲಿ ಜೂಜಾಡುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ವರುಣಾ ಠಾಣೆ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಜೂಜಿನಲ್ಲಿ ಪಣಕ್ಕಿಟ್ಟಿದ್ದ ₹40,980 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಾಗಿದೆ.

ಮೂವರ ಬಂಧನ: ತಾಲ್ಲೂಕಿನ ತಳೂರು ಗ್ರಾಮದ ಕೆರೆ ಏರಿ ಬಳಿ ಜೂಜಾಡುತ್ತಿದ್ದವರ ಮೇಲೆ ದಾಳಿ ನಡೆಸಿರುವ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು 3 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ ₹12,030 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.

ಅಂದರ್–ಬಾಹರ್ ಇಸ್ಪೀಟ್ ಜೂಜಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ನಾಲ್ವರು ಪರಾರಿಯಾಗಿದ್ದು, ಮೂವರು ಸಿಕ್ಕಿಬಿದ್ದಿದ್ದಾರೆ. ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-39-627309253

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.