ಮೈಸೂರು: ‘ಆರೋಗ್ಯಕರ ಜೀವನಕ್ಕೆ ಕೈಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಇದು ಕಾಯಿಲೆಗಳನ್ನು ತಡೆಯುವ ಅತ್ಯಂತ ಸರಳ ಮತ್ತು ಪರಿಣಾಮಕಾರಿ ಮಾರ್ಗ’ ಎಂದು ಜೆಎಸ್ಎಸ್ ಆಸ್ಪತ್ರೆಯ ನಿರ್ದೇಶಕ ಸಿ.ಪಿ.ಮಧು ಹೇಳಿದರು.

ನಗರದ ಜೆಎಸ್ಎಸ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ವಿಶ್ವ ಕೈ ನೈರ್ಮಲ್ಯ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸೋಂಕು ಅಥವಾ ಕೀಟಾಣುಗಳು ನಮ್ಮ ದೇಹವನ್ನು ಪ್ರವೇಶಿಸುವುದು ಕೈಗಳ ಮೂಲಕ. ಆದ್ದರಿಂದ ಕೈಗಳ ಸ್ವಚ್ಛತೆಗೆ ಪ್ರಧಾನ ಆದ್ಯತೆ ನೀಡಬೇಕು’ ಎಂದರು.

‘ವೈದ್ಯರು ರೋಗಿಯನ್ನು ಮುಟ್ಟುವ ಮುನ್ನ ಮತ್ತು ನಂತರ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ಇದರಿಂದ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಕಡಿಮೆ. ಈ ಅಭ್ಯಾಸವನ್ನು ಎಲ್ಲಾ ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ರೂಢಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಜೆಎಸ್ಎಸ್ ಆಸ್ಪತ್ರೆಯ ಉಪ ನಿರ್ದೇಶಕರಾದ ಡಾ.ಸುಮನ, ‘ಆಸ್ಪತ್ರೆಯಲ್ಲಿ ನರ್ಸ್ಗಳ ಪಾತ್ರ ಬಹಳ ಪ್ರಮುಖವಾದದ್ದು. ಅವರು ವಾರ್ಡ್ಗೆ ಪ್ರವೇಶಿಸುವ ವೈದ್ಯರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೈ ನೈರ್ಮಲ್ಯ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದರು.

‘ಕೈ ನೈರ್ಮಲ್ಯ ಎಂಬ ಪದ ತುಂಬಾ ಚಿಕ್ಕ ವಿಷಯವಾಗಿದ್ದರೂ ಇದು ಸಾವನ್ನು ತಪ್ಪಿಸುತ್ತದೆ. ನಮ್ಮಿಂದ ಇನ್ನೂಬ್ಬರಿಗೆ ತೊಂದರೆ ಆಗಬಾರದು. ಸೋಂಕು ಇರುವ ವ್ಯಕ್ತಿಯನ್ನು ಮುಟ್ಟಿ ಆ ಸೋಂಕು ನಮ್ಮ ಕೈಗಳಿಂದ ಮತ್ತೊಬ್ಬರಿಗೆ ಹರಡಿ ಅವರ ಪ್ರಾಣಕ್ಕೆ ಕುತ್ತಾಗಬಹುದು. ಆದ್ದರಿಂದ ನಮಗಾಗಿ ಮತ್ತು ಬೇರೆಯವರಿಗಾಗಿ ನಾವು ನಮ್ಮ ಕೈಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು’ ಎಂದು ಜೆಎಸ್ಎಸ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಡಿ.ಶ್ರೀನಿವಾಸ್ಮೂರ್ತಿ ಸಲಹೆ ನೀಡಿದರು.

ಆಸ್ಪತ್ರೆಯ ಸೋಂಕು ನಿಯಂತ್ರಣ ಸಮಿತಿಯ ಕಾರ್ಯದರ್ಶಿಗಳಾದ ಡಾ.ಚೇತಕ್ ಕೆ.ಬಿ. ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಜಾನೆಟ್ ಮಥಿಯಾಸ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-39-1355592839

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.