ಮೈಸೂರು: ಜೆಎಸ್ಎಸ್ ಮಹಾವಿದ್ಯಾಪೀಠದಿಂದ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಏ.3ರಿಂದ 25ರವರೆಗೆ ಚಿತ್ರಕಲಾ ಶಿಬಿರವನ್ನು ನಗರದ ಜೆಎಸ್ಎಸ್ ಬಾಲಜಗತ್ ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

6ರಿಂದ 9 ವರ್ಷ, 10ರಿಂದ 13 ವರ್ಷ ಮತ್ತು 14ರಿಂದ 17 ವರ್ಷ ವಯಸ್ಸಿನ ಮಕ್ಕಳನ್ನು ಮೂರು ಪ್ರತ್ಯೇಕ ಗುಂಪುಗಳಾಗಿ ವಿಂಗಡಿಸಿ, ಪ್ರತಿ ವಿಭಾಗದಲ್ಲೂ 30 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು. ಅನುಭವಿ ಕಲಾವಿದರಿಂದ ಪ್ರಾತ್ಯಕ್ಷಿಕೆ ಇರಲಿದೆ. ನಿಸರ್ಗ ಚಿತ್ರ ರಚಿಸಲು ಮಕ್ಕಳಿಗೆ ಒಂದು ದಿನದ ಪ್ರವಾಸ ಏರ್ಪಡಿಸಲಾಗುವುದು. ಶಿಬಿರಾರ್ಥಿಗಳಿಗೆ ಡ್ರಾಯಿಂಗ್ ಪೇಪರ್ ನೀಡಲಾಗುವುದು.

ಪ್ರತಿದಿನ ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ತರಗತಿಗಳು ನಡೆಯಲಿವೆ. 11ರಿಂದ 11.30ರವರೆಗೆ ಬಿಡುವು ಕೊಡಲಾಗುವುದು. ಮಕ್ಕಳು ರಚಿಸಿದ ಚಿತ್ರಗಳ ಪ್ರದರ್ಶನವನ್ನು ಏ.25ರಂದು ಏರ್ಪಡಿಸಲಾಗುವುದು. ಪ್ರತಿ ವಿಭಾಗದಲ್ಲೂ ಉತ್ತಮ ಚಿತ್ರಗಳಿಗೆ ಮೂರು ನಗದು ಬಹುಮಾನ ಹಾಗೂ ಪ್ರಶಸ್ತಿಪತ್ರ ನೀಡಲಾಗುವುದು.

ಅರ್ಜಿಗಳನ್ನು ರಾಮಾನುಜ ರಸ್ತೆಯ ಶಿವರಾತ್ರಿ ರಾಜೇಂದ್ರ ವೃತ್ತದಲ್ಲಿರುವ ಜೆಎಸ್ಎಸ್ ಬಾಲಜಗತ್ ಶಾಲೆಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಏ.1ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ. 80954 40122 (ಪಿ.ಎಸ್. ಸಲಬಣ್ಣನವರ) ಸಂಪರ್ಕಿಸಬಹುದು ಎಂದು ಸಂಚಾಲಕ ಎಸ್.ಎಂ. ಜಂಬುಕೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.