ಮೈಸೂರು: ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಇದರ ತರಬೇತಿ ಮತ್ತು ನಿಯೋಜನಾ ಕೇಂದ್ರದಿಂದ ಆಯೋಜಿಸಲಾದ ‘ಯಂಗ್ ಅಲ್ಯುಮ್ನಿ ಮೀಟ್ 4.0’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಆ್ಯಪಲ್, ಗೂಗಲ್, ಮೈಕ್ರೋಸಾಫ್ಟ್ ಸೇರಿದಂತೆ ಅನೇಕ ಜಾಗತಿಕ ಕಂಪನಿಗಳಲ್ಲಿ ಸೇವೆ ಸಲ್ಲಿಸುತ್ತಿರುವ 200ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿವಿಧ ತಾಂತ್ರಿಕ ಮತ್ತು ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಳೆಯ ವಿದ್ಯಾರ್ಥಿಗಳು 2027ನೇ ಸಾಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಉದ್ಯೋಗ, ತಂತ್ರಜ್ಞಾನ, ಇಂಟರ್ನ್ಶಿಪ್, ಉನ್ನತ ಶಿಕ್ಷಣ ಹಾಗೂ ವೃತ್ತಿಜೀವನದ ಬೆಳವಣಿಗೆ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕುಲಪತಿ ಎ.ಎನ್.ಸಂತೋಷ್ ಕುಮಾರ್, ವಿದ್ಯಾರ್ಥಿಗಳು ಕಾಲೇಜಿನಿಂದ ಕಾರ್ಪೊರೇಟ್ ಕ್ಷೇತ್ರಕ್ಕೆ ಕಾಲಿಟ್ಟ ನಂತರವೂ ನಿರಂತರ ಕಲಿಕೆ ಅತ್ಯಂತ ಮುಖ್ಯ ಎಂದು ಹೇಳಿದರು.

ಇಂದಿನ ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನ ಯುಗದಲ್ಲಿ ಹೊಸ ಕೌಶಲ ನಿರಂತರವಾಗಿ ಅಳವಡಿಸಿಕೊಳ್ಳುವುದು ಅತ್ಯವಶ್ಯಕ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಟೆಕ್ನಾಲಜಿ ಮತ್ತು ಪ್ರೊಡಕ್ಟ್ ಲೀಡರ್ ಶ್ರೀಪತಿ ಭಟ್ ಮಾತನಾಡಿದರು. ಅಲ್ಯುಮ್ನಿ ಅಸೋಸಿಯೇಷನ್ ಡೀನ್ ಎಂ.ಎನ್.ನಾಗೇಂದ್ರ ಪ್ರಸಾದ್, ರಿಜಿಸ್ಟ್ರಾರ್ ಎಸ್.ಎ.ಧನರಾಜ್, ಡೀನ್ ಎಂಜಿನಿಯರಿಂಗ್ ಸಿ.ನಟರಾಜು, ತರಬೇತಿ ಮತ್ತು ನಿಯೋಜನಾ ಅಧಿಕಾರಿ ಎಂ.ಪ್ರದೀಪ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-39-978924580

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.