ಮೈಸೂರು: ‘ದತ್ತಾಂಶದ ಮೂಲಕ ಪರಿಹಾರ ಕಂಡುಕೊಳ್ಳಲು, ವೆಬ್ ಮತ್ತು ಮೊಬೈಲ್ ಅನ್ವಯಿಕಗಳನ್ನು ತಯಾರಿಸಲು ಜಿಲ್ಲಾ ಮಟ್ಟದಲ್ಲಿ ‘ಕೆ-ಜಿಐಎಸ್ 2.0’ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ’ ಎಂದು ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕ ರಾಜೇಶ್ ಎನ್.ಎಲ್. ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಸ್ಥಳೀಯ ಆಡಳಿತಕ್ಕಾಗಿ ಜಿಐಎಸ್ ಆಧಾರಿತ ಮಾಹಿತಿಯನ್ನು ತಲುಪಿಸುವ ತಾಂತ್ರಿಕ ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.

‘ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ)ಯು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಹಲವು ಮಹತ್ವದ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಕೆ-ಜಿಐಎಸ್ ಆವೃತ್ತಿ 1.0– 2016ರಲ್ಲಿ ಅನುಷ್ಠಾನಗೊಳಿಸಿತ್ತು. 600 ಜಿಐಎಸ್ ಪದರಗಳು ಮತ್ತು 20 ಲಕ್ಷ ಸರ್ಕಾರಿ ಆಸ್ತಿಗಳ ಮಾಹಿತಿಯನ್ನು ಕೆ-ಜಿಐಎಸ್ ಪೋರ್ಟಲ್ನಲ್ಲಿ ಒಂದೇ ಸೂರಿನಲ್ಲಿ ಲಭ್ಯವಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಇದರಲ್ಲಿ 41 ಮೊಬೈಲ್ ಅನ್ವಯಿಕೆಗಳು ಮತ್ತು 60 ವೆಬ್ ಅನ್ವಯಿಕೆಗಳು ಲಭ್ಯ ಇದ್ದು, ನಾಗರಿಕರು ಮತ್ತು ಇಲಾಖೆಗಳವರು ಬಳಸಿಕೊಳ್ಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.

ತಂತ್ರಜ್ಞಾನದ ಕಾರಣದಿಂದ:

‘ಯಾವ ಆಸ್ತಿ ಯಾರ ಹೆಸರಿನಲ್ಲಿ ಇದೆ ಎಂಬುದನ್ನು ದಿಶಾಂಕ್ ಆ್ಯಪ್’ನಲ್ಲಿ ತಿಳಿಯಬಹುದಾಗಿದೆ. ಅಂತೆಯೇ ಹವಾಮಾನ ವರದಿಯನ್ನು ಆ್ಯಪ್ ಮೂಲಕ 2–3 ದಿನ ಮುಂಚೆಯೇ ಪಡೆಯಬಹುದಾಗಿದೆ. ಮೈಸೂರು ಮುಡಾಗೆ 2009ರಲ್ಲಿ ಅದರ ವ್ಯಾಪ್ತಿಯ ಆಸ್ತಿಗಳ ಬಗ್ಗೆ ಜಿಯೋ ಮ್ಯಾಪ್ ಮಾಡಿಕೊಡಲಾಗಿತ್ತು. 2016ರಲ್ಲಿ ಕೆಜಿಐಎಸ್ 1.0 ಜಾರಿಗೆ ತರಲಾಗಿತ್ತು. 2024ರಲ್ಲಿ ಕೆಜಿಐಎಸ್ 2.0 ಅಭಿವೃದ್ಧಿಪಡಿಸಲಾಗಿದೆ. ಇದಕ್ಕೆ ಪ್ರಶಸ್ತಿ ದೊರೆತಿದೆ’ ಎಂದು ತಿಳಿಸಿದರು.

‘ಪ್ರತಿ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯಿತಿ ತನ್ನದೇ ಆದ ವೈಶಿಷ್ಟ್ಯಗಳ ಜೊತೆಗೆ ಸ್ಥಳೀಯ ಸಮಸ್ಯೆಗಳನ್ನೂ ಹೊಂದಿವೆ. ಇವುಗಳಿಗೆ ಭೂದೈಶಿಕ ದತ್ತಾಂಶದ ಮೂಲಕ ಪರಿಹಾರ ಕಂಡುಕೊಳ್ಳಲು, ವೆಬ್ ಮತ್ತು ಮೊಬೈಲ್ ಅನ್ವಯಿಕೆಗಳನ್ನು ತಯಾರಿಸಲು ಆಯಾ ಜಿಲ್ಲಾಡಳಿತದ ಸಹಯೋಗದಲ್ಲಿ ಕಾರ್ಯಾಗಾರ ನಡೆಸಲಾಗುತ್ತಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು, ‘ತಾಂತ್ರಿಕತೆಗೆ ಎಐ ತಂತ್ರಜ್ಞಾನ ಬಂದು ಆವರಿಸಿಕೊಳ್ಳುತ್ತಿದೆ. ಸರ್ಕಾರದಿಂದ ಮಾಡಿಕೊಟ್ಟಿರುವ ಆ್ಯಪ್ಗಳು ಕರಾರವಕ್ಕಾಗಿವೆ ಹಾಗೂ ಸುರಕ್ಷಿತವಾಗಿಯೂ ಇವೆ’ ಎಂದು ಹೇಳಿದರು.

ಆ್ಯಪ್ನಲ್ಲಿ:

ಸಿಸಿಎಫ್ ರವಿಶಂಕರ್ ಮಾತನಾಡಿ, ‘ದಿಶಾಂಕ್ ಆ್ಯಪ್ನಲ್ಲಿ ಭೂಮಿಯ ಮಾಲೀಕತ್ವ ತಿಳಿಯಬಹುದು. ಅರಣ್ಯ ಇಲಾಖೆಯ ಭೂಮಿಯ ಸಮಸ್ಯೆ ಬಂದಾಗ ನಾವು ಈ ಕೇಂದ್ರವನ್ನು ಸಂಪರ್ಕಿಸುತ್ತೇವೆ’ ಎಂದು ತಿಳಿಸಿದರು.

ಎಎಸ್ಪಿ ಸಿ. ಮಲ್ಲಿಕ್ ಮಾತನಾಡಿ, ‘ಟ್ರಾಫಿಕ್ ಸಿಗ್ನಲ್ಗಳಲ್ಲಿ ಅಳವಡಿಸಿರುವ ತಂತ್ರಜ್ಞಾನದಿಂದ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಮಾಲೀಕರಿಗೆ ಸ್ವಯಂ ದಂಡ ವಿಧಿಸಲಾಗುತ್ತದೆ. ಸಿಗ್ನಲ್ಗಳು ತಂತ್ರಜ್ಞಾನದ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತವೆ’ ಎಂದು ತಿಳಿಸಿದರು.

ಡಿಸಿಪಿ ಕೆ.ಎಸ್. ಸುಂದರ್ ರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಉಪ ಕಾರ್ಯದರ್ಶಿ ಸವಿತಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.