ಮೈಸೂರು: ತಾಲೂಕಿನ ಕೆ. ಹೆಮ್ಮನಹಳ್ಳಿಯಲ್ಲಿ ಮೀನು ಹಿಡಿಯಲು ಹೋದ ಬಿಹಾರ ಮೂಲದ ಯುವಕ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಬಿಹಾರ ಮೂಲದ ಅಮಿತ್ ಕುಮಾರ್ (26) ಮೃತ ಯುವಕ. ಸಮೀಪದ ಕೋಳಿ ಫಾರಂನಲ್ಲಿ ಕೆಲಸ ಮಾಡಿಕೊಂಡಿದ್ದ ಅಮಿತ್ ಕುಮಾರ್ ತನ್ನ ಗೆಳೆಯರೊಂದಿಗೆ ಕೆರೆಗೆ ಮೀನು ಹಿಡಿಯಲು ಬುಧವಾರ ಬೆಳಿಗ್ಗೆ ತೆರಳಿದ್ದ. ಮೀನು ಹಿಡಿದು ಹಿಂದಿರುಗುವಾಗ ಇಬ್ಬರು ದಡ ತಲುಪಿದರು. ಆದರೆ ಅಮಿತ್ ಕುಮಾರ್ಗೆ ಈಜಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಸಂಜೆವರೆಗೂ ಅಗ್ನಿಶಾಮಕ ಸಿಬ್ಬಂದಿ ಮೃತದೇಹದ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಸಿದರು. ಆದರೆ ಮೃತದೇಹ ದೊರೆತಿಲ್ಲ. ಗುರುವಾರ ಕಾರ್ಯಾಚರಣೆ ಮುಂದುವರೆಯಲಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-39-1374121522

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.