ಮೈಸೂರು: ‘ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಉದ್ಯೋಗದಲ್ಲಿ ಶೇ 25ರಷ್ಟು ಮೀಸಲಾತಿ ಕಲ್ಪಿಸಬೇಕು’ ಎಂದು ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಒತ್ತಾಯಿಸಿದರು.

ನಗರದ ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ವೇದಿಕೆಯು ಹಮ್ಮಿಕೊಂಡಿದ್ದ ‘ಕುವೆಂಪು ಶೈಕ್ಷಣಿಕ ಚಿಂತನೆಗಳು’ ಕುರಿತ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸರ್ಕಾರಿ ಕನ್ನಡ ಶಾಲೆಗಳು ಉಳಿವಿನ ಬಗ್ಗೆ ರಾಜ್ಯ ಸರ್ಕಾರಗಳು ಬಾಯಿ ಮಾತಿನ ಅನುಕಂಪ ತೋರಿಸುವುದನ್ನು ಬಿಡಬೇಕು. ಕನ್ನಡ ಮಾಧ್ಯಮದಲ್ಲಿ ಓದಿದವರ ಬದುಕಿಗೆ ಬೆಂಬಲ ನೀಡುವಂಥ ನಿರ್ಧಾರಗಳನ್ನು ಕೈಗೊಳ್ಳಬೇಕು’ ಎಂದರು.

‘ಕನ್ನಡ ಉಳಿಯಬೇಕಾದರೆ, ಕನ್ನಡ ಶಾಲೆಗಳು ಉಳಿಯಬೇಕು. ಶತಮಾನದ ಕನ್ನಡ ಶಾಲೆಗಳನ್ನು ಪಾರಂಪರಿಕ ಶಾಲೆಗಳನ್ನಾಗಿ ಪರಿವರ್ತಿಸುವ ಪರಿಕಲ್ಪನೆ ಚೆನ್ನಾಗಿದೆ. ಆದರೆ, ಅದು ಪಾರಂಪರಿಕ ಕಟ್ಟಡವಾಗಷ್ಟೇ ಉಳಿಯಬಾರದು’ ಎಂದರು.

‘ಕುವೆಂಪು ಶೈಕ್ಷಣಿಕ ಚಿಂತನೆಗಳು’ ಕುರಿತು ವಿಚಾರ ಮಂಡಿಸಿದ ಕನ್ನಡ ಉಪನ್ಯಾಸಕ ಉಮೇಶ್ ಬೇವಿನಹಳ್ಳಿ, ‘ವಿಶ್ವಜ್ಞಾನ, ವಿಶ್ವಪ್ರಜ್ಞೆ, ವಿಶ್ವಮೈತ್ರಿ ಹಾಗೂ ವಿಶ್ವಮಾನವ ಗುಣವನ್ನು ಕಲಿಸುವುದೇ ನಿಜವಾದ ಶಿಕ್ಷಣ ಎಂದು ಪ್ರತಿಪಾದಿಸಿದ ಕುವೆಂಪು ಅವರ ಶೈಕ್ಷಣಿಕ ಚಿಂತನೆಗಳ ದರ್ಶನವಾಗಬೇಕಾದರೆ, ಒಮ್ಮೆ ಮಾನಸ ಗಂಗೋತ್ರಿಗೆ ಭೇಟಿ ನೀಡಬೇಕು’ ಎಂದರು.

‘ಪ್ರಜಾವಾಣಿ’ ಬ್ಯೂರೋ ಮುಖ್ಯಸ್ಥ ಕೆ. ನರಸಿಂಹಮೂರ್ತಿ ಗೋಷ್ಠಿಯನ್ನು ಉದ್ಘಾಟಿಸಿದರು. ವೇದಿಕೆಯ ರಾಜ್ಯ ಘಟಕದ ಉಪಾಧ್ಯಕ್ಷ ಟಿ. ಸತೀಶ್ ಜವರೇಗೌಡ, ಸಂಘಟನಾ ಕಾರ್ಯದರ್ಶಿ ವಾಸು ಸಮುದ್ರವಳ್ಳಿ, ಜಿಲ್ಲಾ ಘಟಕದ ಅಧ್ಯಕ್ಷ ಬಸಪ್ಪ ಸಿ. ಸಾಲುಂಡಿ, ಮಹಾವಿದ್ಯಾಲಯದ ಪ್ರಾಂಶುಪಾಲ ಅಂತೋಣಿ ಪೌಲ್ ರಾಜ್, ರಂಗಕರ್ಮಿ ಚಂದ್ರು ಮಂಡ್ಯ, ಯುವ ಕವಿ ಜಿ. ರವೀಂದ್ರ ಕುಮಾರ್ ಪಾಲ್ಗೊಂಡರು. ನಿವೃತ್ತ ಶಿಕ್ಷಕ ಬಸವರಾಜು, ಕುವೆಂಪು ಅವರ ‘ಶ್ರೀ ರಾಮಾಯಣ ದರ್ಶನಂ’ ಮಹಾಕಾವ್ಯದ ಆಯ್ದ ಭಾಗ ವಾಚಿಸಿದರು. ವಿದ್ಯಾರ್ಥಿಗಳಿಂದ ಕವನ ವಾಚನ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.