ಮೈಸೂರು: ‘ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ಇಂದು ಬೆಂಗಳೂರು ವಿಶ್ವಮಟ್ಟದಲ್ಲಿ ಬೆಳಗುತ್ತಿದೆ. ಅಂದಿನ ಕಾಲದಲ್ಲೇ ಕೆರೆಗಳನ್ನು ನಿರ್ಮಿಸಿ ನೀರಿನ ಸಂರಕ್ಷಣೆಗೆ ಅವರು ಹಾಕಿಕೊಟ್ಟ ಮುನ್ನುಡಿ ನಮಗೆಲ್ಲರಿಗೂ ಮಾದರಿ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಲಲಿತಾದ್ರಿಪುರ ಗ್ರಾಮದಲ್ಲಿ ಮಂಗಳವಾರ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ'ದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.

‘ರಾಜಕಾರಣ ಎನ್ನುವುದು ಕೇವಲ ಅಧಿಕಾರ ಹಿಡಿಯುವ ಸಾಧನವಾಗಬಾರದು. ಅದರಲ್ಲಿ ಸೇವಾ ಮನೋಭಾವ ಮುಖ್ಯ. ಅಧಿಕಾರ ಇಂದು ಇರುತ್ತದೆ, ನಾಳೆ ಹೋಗುತ್ತದೆ; ಅದು ಯಾರೊಬ್ಬರಿಗೂ ಶಾಶ್ವತವಲ್ಲ. ಆದರೆ ಜನ ತೋರುವ ಪ್ರೀತಿ ದೊಡ್ಡದು. ಅದಕ್ಕೆ ನಾನು ಸದಾ ಋಣಿಯಾಗಿರುತ್ತೇನೆ’ ಎಂದು ಮಾರ್ಮಿಕವಾಗಿ ನುಡಿದರು.

ಇದೇ ವೇಳೆ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಅವರು, ‘ನನೆಗುದಿಗೆ ಬಿದ್ದಿರುವ ಸಮುದಾಯ ಭವನದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಪುತ್ಥಳಿ ಅನಾವರಣಗೊಳಿಸಿ ಆಶೀರ್ವಚನ ನೀಡಿದರು. ‘ಮಹಾನ್ ಪುರುಷರ ಪುತ್ಥಳಿಗಳು ಕೇವಲ ಸಂಕೇತಗಳಲ್ಲ, ಅವು ಅವರ ತತ್ವಗಳನ್ನು ಪಾಲಿಸಲು ನಮಗೆ ಪ್ರೇರಣೆ ನೀಡುವ ಶಕ್ತಿ ಕೇಂದ್ರಗಳು’ ಎಂದರು.

ಶಾಸಕರಾದ ಜಿ.ಡಿ. ಹರೀಶ್ ಗೌಡ, ಕೆ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಮಾಜಿ ಸಚಿವ ಸಾ.ರಾ. ಮಹೇಶ್, ಅಶ್ವಿನ್ ಕುಮಾರ್, ಮಾಜಿ ಮೇಯರ್ ರವಿಕುಮಾರ್, ಮುಖಂಡರಾದ ಕೆ.ವಿ. ಶ್ರೀಧರ್, ಎಸ್.ಬಿ.ಎಂ. ಮಂಜು ಪಾಲ್ಗೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-39-1003198031

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.