ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ (ಆಡಳಿತ) ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕುಸುಮಾಕುಮಾರಿ 2006ನೇ ಬ್ಯಾಚ್ನ ಕೆಎಎಸ್ ಅಧಿಕಾರಿ. ಈ ಹಿಂದೆ ಮೈಸೂರು ತಾಲ್ಲೂಕು ಪಂಚಾಯಿತಿ ಇಒ ಹಾಗೂ ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತರಾಗಿದ್ದರು. ಕೆಎಸ್ಒಯುನಲ್ಲಿ ಬಹುತೇಕ ಪ್ರಾಧ್ಯಾಪಕರೇ ಕುಲಸಚಿವರಾಗಿ ಕೆಲಸ ಮಾಡಿದ್ದು, ಇದೀಗ ಆ ಜಾಗಕ್ಕೆ ಅಧಿಕಾರಿ ಒಬ್ಬರನ್ನು ಸರ್ಕಾರ ನಿಯೋಜಿಸಿದೆ.

ಈವರೆಗೂ ಕುಲಸಚಿವರಾಗಿದ್ದ ಪ್ರೊ.ಎಸ್.ಕೆ. ನವೀನ್ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರು ಮಂಗಳೂರು ವಿ.ವಿ. ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಮರು ನಿಯೋಜನೆಗೊಂಡಿದ್ದಾರೆ. ಕುಲಸಚಿವರಾಗಿದ್ದ ಪ್ರೊ.ಕೆ.ಬಿ.ಪ್ರವೀಣ್ ವಿರುದ್ಧ ಆರೋಪಗಳು ಕೇಳಿ ಬಂದ ಕಾರಣ ಏಳು ತಿಂಗಳ ಹಿಂದೆ ನವೀನ್ಕುಮಾರ್ ಅವರನ್ನು ಈ ಹುದ್ದೆಗೆ ಸರ್ಕಾರ ನೇಮಕ ಮಾಡಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-39-1663576131

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.