ಬೆಟ್ಟದಪುರ: ವಿಲೀನದ ಹೆಸರಿನಲ್ಲಿ ಸಮೀಪದ ಕೂರಗಲ್ಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾನುವಾರ ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಉಪಾಧ್ಯಕ್ಷ ಎಚ್.ಎಂ. ಬಸವರಾಜು, ಮಾತನಾಡಿ, ‘ಕೂರಗಲ್ಲು ಗ್ರಾಮದ ಶಾಲೆಯನ್ನು 4 ಕಿ.ಮೀ ದೂರದಲ್ಲಿರುವ ಬೆಟ್ಟದಪುರದ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ವಿಲೀನಗೊಳಿಸಲು ಸರ್ಕಾರ ಆದೇಶಿಸಿರುವುದು ಖಂಡನೀಯ’ ಎಂದು ಹೇಳಿದರು.

‘ಬಡ ಮಕ್ಕಳಿಗೆ ಶಿಕ್ಷಣವನ್ನು ಖಾತ್ರಿಪಡಿಸಬೇಕಾದ ಸರ್ಕಾರವೇ ಶಿಕ್ಷಣದ ವ್ಯಾಪಾರೀಕರಣಕ್ಕೆ ಉತ್ತೇಜನ ನೀಡುತ್ತಿದ್ದು, ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಹೆಸರಿನಲ್ಲಿ ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಕೆಪಿಎಸ್ ಶಾಲೆಗಳ ನಿರ್ವಹಣೆಯನ್ನು ಹೊರಗುತ್ತಿಗೆ ನೀಡುವ ಮೂಲಕ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಹಂತ ಹಂತವಾಗಿ ಖಾಸಗಿ ಕಂಪನಿಗಳ ಕೈಗೆ ಒಪ್ಪಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ಆರೋಪಿಸಿದರು.

‘ಈಶ್ವರಚಂದ್ರ ವಿದ್ಯಾಸಾಗರ, ಜ್ಯೋತಿಬಾಯಿ ಫುಲೆ, ಸಾವಿತ್ರಿಬಾಯಿ ಫುಲೆ, ಕುದ್ಮುಲ್ ರಂಗರಾವ್ ಸೇರಿದಂತೆ ಅನೇಕ ಮಹನೀಯರ ಹೋರಾಟದ ಫಲವಾಗಿ ಎಲ್ಲ ಮಕ್ಕಳಿಗೂ ಶಿಕ್ಷಣ ದೊರೆಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಮುಚ್ಚುವ ಮೂಲಕ ಸರ್ಕಾರ ಅವರ ಹೋರಾಟದ ಆಶಯಗಳಿಗೆ ಧಕ್ಕೆ ತರುತ್ತಿದೆ. ಗ್ರಾಮೀಣ ಶಾಲೆಗಳ ಮುಚ್ಚುವಿಕೆ ಬಡ ಮಕ್ಕಳ ಭವಿಷ್ಯವನ್ನು ಕತ್ತಲೆಗೆ ತಳ್ಳುವ ಜನವಿರೋಧಿ ನೀತಿಯಾಗಿದೆ’ ಎಂದು ಟೀಕಿಸಿದರು.

‘ರಾಮನಗರ ಹಾಗೂ ಅರಸೀಕೆರೆ ತಾಲ್ಲೂಕುಗಳಲ್ಲಿ ಶಾಲೆ ಮುಚ್ಚುವ ಉದ್ದೇಶದಿಂದ ಗ್ರಾಮಸ್ಥರನ್ನು ದಾರಿ ತಪ್ಪಿಸಿ ಒಪ್ಪಿಗೆ ಪತ್ರಗಳಿಗೆ ಸಹಿ ಪಡೆಯಲಾಗಿದೆ ಎಂಬ ಆರೋಪಗಳಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ತಂತ್ರಗಳಿಗೆ ಬಲಿಯಾಗದೆ ತಮ್ಮೂರಿನ ಶಾಲೆಗಳನ್ನು ಉಳಿಸಿಕೊಳ್ಳಲು ಸಂಘಟಿತ ಹೋರಾಟ ನಡೆಸಬೇಕು’ ಎಂದು ಕರೆ ನೀಡಿದರು.

ಗ್ರಾಮಸ್ಥ ಹರೀಶ್ ಮಾತನಾಡಿ, ‘ನಮ್ಮೂರಿನ ಸರ್ಕಾರಿ ಶಾಲೆಗೆ ಅಗತ್ಯ ಶಿಕ್ಷಕರನ್ನು ನೇಮಕ ಮಾಡಬೇಕು. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಿಗೆ ನೀಡುತ್ತಿರುವ ಸೌಲಭ್ಯಗಳನ್ನು ಗ್ರಾಮೀಣ ಶಾಲೆಗಳಿಗೂ ಒದಗಿಸಿದರೆ ವಿದ್ಯಾರ್ಥಿಗಳ ಸಂಖ್ಯೆ ಸಹಜವಾಗಿಯೇ ಹೆಚ್ಚಾಗುತ್ತದೆ. ಶಾಲೆಗಳನ್ನು ಮುಚ್ಚುವ ಬದಲು ಅವುಗಳನ್ನು ಬಲಪಡಿಸುವ ಕಾರ್ಯ ಸರ್ಕಾರ ಮಾಡಬೇಕು’ ಎಂದು ಒತ್ತಾಯಿಸಿದರು.

ಎಐಡಿಎಸ್ಒ ಸಂಘಟನೆಯ ಪದಾಧಿಕಾರಿ ಪೂರ್ಣಿಮಾ, ಗ್ರಾಮಸ್ಥರಾದ ರವಿ ಕೆ.ಟಿ., ರವೀಶ್ ಕೆ.ಎಂ., ದೊಡ್ಡತಿಮ್ಮಯ್ಯ, ಹರೀಶ್, ಸಚಿನ್ ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-38-250333898

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.