ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಂಗಳವಾರ ಕಾರ್ಯಾಚರಣೆ ಕೈಗೊಂಡು, ದೇವನೂರು ಗ್ರಾಮದ ಎರಡು ಕಡೆಗಳಲ್ಲಿನ ಸುಮಾರು ₹80 ಕೋಟಿ ಮೌಲ್ಯದ 9 ಎಕರೆ ಒತ್ತುವರಿಯನ್ನು ತೆರವುಗೊಳಿಸಿದರು.

ಜೆಸಿಬಿ ಹಾಗೂ ಇಟಾಚಿ ಯಂತ್ರಗಳೊಂದಿಗೆ ಮುಂಜಾನೆ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳ ತಂಡವು ಮೈಸೂರು ತಾಲ್ಲೂಕಿನ ಕಸಬಾ ಹೋಬಳಿಯ ದೇವನೂರು ಗ್ರಾಮದ ಸರ್ವೆ ಸಂಖ್ಯೆ 155, 156, 153/2ರಲ್ಲಿನ 5 ಎಕರೆ 19 ಗುಂಟೆ ಹಾಗೂ ಸರ್ವೆ ಸಂಖ್ಯೆ 228/2, 229/1, 229/2 ರ ವ್ಯಾಪ್ತಿಯ 3 ಎಕರೆ 22 ಗುಂಟೆ ಜಾಗವನ್ನು ವಶಕ್ಕೆ ಪಡೆಯಿತು. ಇಲ್ಲಿ ನಿರ್ಮಿಸಲಾಗಿದ್ದ ಶೆಡ್ಗಳನ್ನು ತೆರವುಗೊಳಿಸಿತು.

ಈ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಅಲ್ಲಿ ವಾಹನಗಳ ನಿಲುಗಡೆ ಮತ್ತಿತರ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿತ್ತು.

‘ತೆರವು ಸಂಬಂಧ ವಾರದ ಹಿಂದೆಯೇ ನೋಟಿಸ್ ನೀಡಲಾಗಿತ್ತು. ಆದರೂ ಒತ್ತುವರಿದಾರರು ತೆರವುಗೊಳಿಸುವ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದರು. ಕಾನೂನು ಪಾಲನೆ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಟ್ಟು ಒತ್ತುವರಿ ತೆರವುಗೊಳಿಸಿದ್ದೇವೆ’ ಎಂದು ಎಂಡಿಎ ಆಯುಕ್ತ ಕೆ.ಆರ್. ರಕ್ಷಿತ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-40-2066013205

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.