ಮೈಸೂರು: ಮಹದೇಶ್ವರ ಬೆಟ್ಟದ ನಾಗಮಲೆಗೆ ಭೇಟಿ ನೀಡುವ ಭಕ್ತರ ಮೇಲೆ ಚಿರತೆ ದಾಳಿ ನಡೆಯುತ್ತಿದ್ದು, ಭಕ್ತರಿಗೆ ಅರಣ್ಯ ಇಲಾಖೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಮೈಸೂರು ಕನ್ನಡ ವೇದಿಕೆ ಸದಸ್ಯರು ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟಿಸಿದರು.

ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ ಮಾತನಾಡಿ, ‘ಭಕ್ತರ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆಯಲು ಅರಣ್ಯ ಇಲಾಖೆಯ ಬೇಜವಾಬ್ದಾರಿಯೇ ಕಾರಣ. ಭಕ್ತರ ಮುಕ್ತ ಪ್ರವೇಶಕ್ಕೆ ಕಡಿವಾಣ ಹಾಕಿ, ನಾಗಮಲೆ ದರ್ಶನಕ್ಕೆ ಆನ್ಲೈನ್ ಮೂಲಕ ₹ 200 ಪ್ರವೇಶ ಶುಲ್ಕ ವಿಧಿಸಿ ಸುತ್ತೋಲೆ ಹೊರಡಿಸಿರುವುದು ವಿಷಾದನೀಯ. ಈ ಬಗ್ಗೆ ಕೂಡಲೇ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಭಕ್ತರಿಗೆ ಸೂಕ್ತ ರಕ್ಷಣೆ ನೀಡಬೇಕು. ಮಾರ್ಗದ ಉದ್ದಕ್ಕೂ ಅಲ್ಲಲ್ಲಿ ಗಾರ್ಡ್ ನೇಮಕ ಮಾಡಬೇಕು. ಇಲ್ಲದಿದ್ದರೆ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಸಿದ್ದಪ್ಪ ಎಲ್ಐಸಿ, ಹೊನಕೆರೆ ಸ್ವಾಮಿ, ಗೋವಿಂದರಾಜು, ಗೋಪಿ, ಬೀಡಾಬಾಬು, ಮಾದಪ್ಪ, ರಮೇಶ್, ಸುನಿಲ್, ಸ್ವಾಮಿ ಗೈಡ್, ಸಾಯಿ ಚಾಮರಾಜು, ಶಿವಗೌಡ, ಚಿನ್ನಪ್ಪ, ಕಾವೇರಮ್ಮ, ಮಾಲಿನಿ, ಲಕ್ಷ್ಮೀಪತಿ, ನಾಗರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-39-1851616042

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.