ಮೈಸೂರು: ‘ದತ್ತಿ ಕಾರ್ಯಕ್ರಮಗಳಿಂದ ಸಾಹಿತ್ಯದ ಬೆಳವಣಿಗೆ ಆಗುತ್ತದೆ. ಇಂತಹ ಕಾರ್ಯಕ್ರಮಗಳ ಪ್ರಸ್ತುತತೆ ಹೆಚ್ಚಿದೆ’ ಎಂದು ಸಾಹಿತಿ ಸಿ.ಪಿ. ಕೃಷ್ಣಕುಮಾರ್ ಹೇಳಿದರು.

ಇಲ್ಲಿನ ಜೆಎಸ್ಎಸ್ ಆಸ್ಪತ್ರೆ ಆವರಣದಲ್ಲಿರುವ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಮಂಗಳವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಹಾಗೂ ಮೈಸೂರು ನಗರ ಘಟಕ ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ಆಯೋಜಿಸಿದ್ದ ಕಮಲಮ್ಮ ಮತ್ತು ಪ್ರೊ.ಜಿ.ಎ.ಶಿವಲಿಂಗಯ್ಯ ಶರಣ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹಿಂದೆ ದತ್ತಿ ಕಾರ್ಯಕ್ರಮಕ್ಕೆ ಪುದುವಟ್ಟು ಎಂದು ಕರೆಯುತ್ತಿದ್ದರು. ದತ್ತಿ ಎಂದರೆ ದಾನ ಎಂದರ್ಥ. ಹಿಂದೆ ಧಾರ್ಮಿಕ ದತ್ತಿ ಇದ್ದವು. ದೊರೆಗಳು ದೇಗುಲಕ್ಕೆ ದತ್ತಿ ಕೊಡುತ್ತಿದ್ದರು’ ಎಂದು ನೆನೆದರು.

‘ನನ್ನ ತಂದೆ ಹೆಸರಿನಲ್ಲಿ ದತ್ತಿ ಪ್ರಶಸ್ತಿ ಸ್ಥಾಪನೆ ಮಾಡಿದ್ದೆ. ಆದರೆ, ಕೆಲ ವರ್ಷಗಳಿಂದ ಅದು ನಿಂತಿದೆ. ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ ಮತ್ತೆ ಆ ದತ್ತಿ ಪ್ರಶಸ್ತಿ ಆರಂಭಿಸಬೇಕು’ ಎಂದು ಮನವಿ ಮಾಡಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಬಿ.ವಿ.ವಸಂತಕುಮಾರ, ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ನಿವೃತ್ತ ಪ್ರಾಧ್ಯಾಪಕ ಡಾ. ಕಲ್ಯಾಣರಾವ್ ಜಿ. ಪಾಟೀಲ, ಬೆಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಎಸ್. ದೇವಿಕಾ, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕು ಜಾನಪದ ಪರಿಷತ್ತಿನ ಅಧ್ಯಕ್ಷ ಕಾಂತೇಶ ರೆಡ್ಡಿ ಗೋಡಿಹಾಳ ಅವರಿಗೆ ಶರಣ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ಪ್ರೊ.ಬಿ.ವಿ. ವಸಂತಕುಮಾರ್, ‘ಶರಣರ ಸಂಸ್ಕೃತಿ ಪುಸ್ತಕದಿಂದ ಬರುವುದಿಲ್ಲ. ಇದು ಗುರು–ಹಿರಿಯರಿಂದ ಬರುತ್ತದೆ. ಶರಣ ಸಂಸ್ಕೃತಿ ಹಾಗೂ ವಚನ ಪರಂಪರೆ ನನ್ನೊಳಗೆ ಬೆರೆತುಕೊಂಡಿದೆ. ಇದಕ್ಕೆಲ್ಲ ಕಾರಣ ನಾನು ಬೆಳೆದ ಪರಿಸರ ಹಾಗೂ ನನಗೆ ಸಿಕ್ಕ ಗುರು–ಹಿರಿಯರ ಮಾರ್ಗದರ್ಶನ’ ಎಂದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ, ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಸೋಮಶೇಖರ, ನಗರ ಘಟಕದ ಅಧ್ಯಕ್ಷ ಜಯಪ್ಪ ಹೊನ್ನಾಳಿ, ಜಿಲ್ಲಾ ಘಟಕದ ಅಧ್ಯಕ್ಷ ಹೆಳವರಹುಂಡಿ ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಸೋಮಶೇಖರ, ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಶೋಭಾರಾಣಿ ಜೈಪ್ರಕಾಶ್, ನಿವೃತ್ತ ಅಧ್ಯಾಪಕ ಪ್ರೊ. ಜಿ.ಎ. ಶಿವಲಿಂಗಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-39-1084837066

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.