ಮೈಸೂರು: ‘ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮಾರ್ಚ್ 16ರಂದು ಬೆಂಗಳೂರಿನ ‘ಫ್ರೀಡಂ ಪಾರ್ಕ್’ನಲ್ಲಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಸತ್ಯನಾರಾಯಣ ತಿಳಿಸಿದರು.

ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾಚಿದೇವ ಯೋಗಾನಂದಪುರಿ ಸ್ವಾಮೀಜಿ, ಬಸವ ಮಾಚಿದೇವ ಸ್ವಾಮೀಜಿ, ಮುಕ್ತಾನಂದ ಸ್ವಾಮೀಜಿ ಹಾಗೂ ಕರ್ನಾಟಕ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಹನುಮಂತಪ್ಪ ಅವರ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದ್ದು, ಜಿಲ್ಲೆಯ ಎಲ್ಲ ತಾಲ್ಲೂಕುಗಳ ಸಮುದಾಯದವರು ಭಾಗವಹಿಸಬೇಕು’ ಎಂದು ಕೋರಿದರು.

‘ನಮ್ಮ ಸಮಾಜ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ತುಂಬಾ ಹಿಂದುಳಿದಿದೆ. ಇದನ್ನು ಪರಿಗಣಿಸಿ, ದೇಶದ 18 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶದಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ. ಆ ಕ್ರಮವನ್ನು ನಮ್ಮಲ್ಲೂ ಕೈಗೊಳ್ಳಲು ರಾಜ್ಯ ಸರ್ಕಾರ ಕಾಳಜಿ ಪ್ರದರ್ಶಿಸಬೇಕು. ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಇದು ಬಹಳ ಅಗತ್ಯವಾಗಿದೆ ಇದರ ಮಹತ್ವವನ್ನು ಅರಿತು ಸಮಾಜದವರು ಪಕ್ಷಾತೀತವಾಗಿ ಪಾಲ್ಗೊಳ್ಳಬೇಕು’ ಎಂದು ತಿಳಿಸಿದರು.

‘ಮಡಿವಾಳರನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಈ ಹಿಂದೆ ಸಮಾಜದ ಸ್ವಾಮೀಜಿಗಳು ಹಾಗೂ ಹಿರಿಯರು ಹೋರಾಟ ನಡೆಸಿದ ಪರಿಣಾಮ, ರಾಜ್ಯ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿ ವರದಿಯನ್ನು ಸ್ವೀಕರಿಸಿದೆ. ಆದರೆ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದೇ ನಿರ್ಲಕ್ಷ್ಯ ವಹಿಸಲಾಗಿದೆ. ಹೀಗಾಗಿ, ಈಗ ಸಂಘಟಿತರಾಗಿ ಹಕ್ಕನ್ನು ಪಡೆದುಕೊಳ್ಳಬೇಕಾಗಿದ್ದು, ಸರ್ಕಾರದ ಮೇಲೆ ಒತ್ತ ಹೇರಬೇಕಾಗಿದೆ’ ಎಂದು ಹೇಳಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026 -27ನೇ ಸಾಲಿನ ಬಜೆಟ್ನಲ್ಲಿ ಮಡಿವಾಳ ಸಮುದಾಯಕ್ಕೆ ಅನುಕೂಲ ಕಲ್ಪಿಸಲು ಮೈಸೂರಿನಲ್ಲಿ ₹ 75 ಲಕ್ಷದಲ್ಲಿ ಆಧುನಿಕ ಲಾಂಡ್ರಿ ಸ್ಥಾಪನೆ ಬಗ್ಗೆ ಘೋಷಿಸಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇವೆ’ ಎಂದರು.

ಗೌರವಾಧ್ಯಕ್ಷ ಬಿ.ಜಿ. ಕೇಶವ್, ಪ್ರಧಾನ ಕಾರ್ಯದರ್ಶಿ ಕೆಂಪಶೆಟ್ಟಿ, ಖಜಾಂಚಿ ಎಚ್.ರವಿಚಂದ್ರ, ಮುಖಂಡರಾದ ಹುಣಸೂರು ನಟರಾಜ್, ಕುಮಾರ್ ಸಿದ್ದನಕೊಪ್ಪಲು, ಹರ್ಷವರ್ಧನ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.