ಮೈಸೂರು: ಇಲ್ಲಿನ ಮಣಿಪಾಲ್ ಆಸ್ಪತ್ರೆಯು ‘ಮಣಿಪಾಲ್ ಆರೋಗ್ಯ ಶೃಂಗ’ ಕಾರ್ಯಕ್ರಮದಲ್ಲಿ ‘ವಿಶ್ವ ಲಿವರ್ ದಿನ’ದ ಅಂಗವಾಗಿ ಮಾರ್ಗದರ್ಶನ ಕಾರ್ಯಕ್ರಮವನ್ನು ಈಚೆಗೆ ನಡೆಸಿತು.

‘ನಿಮ್ಮ ವೈದ್ಯರ ಬಗ್ಗೆ ತಿಳಿಯಿರಿ’ ಕಾರ್ಯಕ್ರಮದಲ್ಲಿ ತಜ್ಞ ವೈದ್ಯರನ್ನು ನೇರವಾಗಿ ಭೇಟಿಯಾಗಿ ಸಂದೇಹ ಪರಿಹರಿಸಿಕೊಳ್ಳುವ ಅವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸಲಾಯಿತು. 25 ಮಂದಿ ಭಾಗವಹಿಸಿದ್ದರು.

‘ಪದೇ ಪದೇ ಎದೆಯುರಿ, ಹೊಟ್ಟೆಯ ಹುಣ್ಣು, ಕರುಳಿನ ತೊಂದರೆಗಳು ಮತ್ತು ಮೂಲವ್ಯಾಧಿ ಕಾಣಿಸಿಕೊಳ್ಳುತ್ತಿದ್ದರೆ, ಅದನ್ನು ಕಡೆಗಣಿಸದೆ ವೈದ್ಯರ ಬಳಿಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಇಂತಹ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದರಿಂದ ಕ್ಯಾನ್ಸರ್ನಂತಹ ಗಂಭೀರ ಸಮಸ್ಯೆಗಳನ್ನು ತಡೆಗಟ್ಟಲು ಸಾಧ್ಯ’ ಎಂದು ವೈದ್ಯರು ತಿಳಿಸಿದರು.

‘ಸಮಯಕ್ಕೆ ಸರಿಯಾಗಿ ಸಮತೋಲಿತ ಆಹಾರ ಸೇವಿಸುವುದು, ದೈಹಿಕ ವ್ಯಾಯಾಮ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುದು ಅಗತ್ಯವಿದೆ. ಆರೋಗ್ಯದ ಸಮಸ್ಯೆ ಎದು ರಾದಾಗ ನಿರ್ಲಕ್ಷಿಸದೇ ವೈದ್ಯರ ಸಲಹೆ ಪಡೆಯಬೇಕು’ ಎಂದು ಹೇಳಿದರು.

ಮೆಡಿಕಲ್ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಸೀನಿಯರ್ ಕನ್ಸಲ್ಟೆಂಟ್ ಡಾ.ಸತೀಶ್ ರಾವ್ ಎ.ಕೆ., ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಯ ಸೀನಿಯರ್ ಕನ್ಸಲ್ಟೆಂಟ್ ಡಾ.ವಾಸುದೇವ್ ಪೈ ಹೊಸದುರ್ಗ, ಡಾ.ನಿಶ್ಚಯ್ ಆರ್., ಆಸ್ಪತ್ರೆಯ ನಿರ್ದೇಶಕ ಸಂದೀಪ್ ಪಟೇಲ್ ಬಿ.ಜೆ. ಮಾರ್ಗದರ್ಶನ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-39-664429109

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.