ಮೈಸೂರು: ಪಿರಿಯಾಪಟ್ಟಣ ತಾಲ್ಲೂಕು ಬ್ಯಾಡರ ಬಿಳಗೂಲಿ ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆದರೂ ಫಲಿತಾಂಶ ಘೋಷಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಾಸುದೇವ ಮೇಟಿ ಬಣದ ಸದಸ್ಯರು ಕಾಡಾ ಕಚೇರಿ ಎದುರುಸೋಮವಾರ ಪ್ರತಿಭಟಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ಲೋಕೇಶ್ ಜಿ. ಮಾತನಾಡಿ, ‘ಬ್ಯಾಡರ ಬಿಳಗುಲಿ ಹಾಲು ಉತ್ಪಾದಕರ ಸಂಘದ ನಿರ್ದೇಶಕರ ಚುನಾವಣೆ ನಾಲ್ಕು ತಿಂಗಳ ಹಿಂದೆ ನಡೆದಿದೆ. ಎರಡು ತಿಂಗಳ ಹಿಂದೆ ನಡೆದ ಅಧ್ಯಕ್ಷ– ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ 10 ನಿರ್ದೇಶಕರಲ್ಲಿ 6 ನಿರ್ದೇಶಕರು ಒಬ್ಬರನ್ನು ಆಯ್ಕೆ ಮಾಡಿದ್ದಾರೆ. ಆದರೆ ಚುನಾವಣಾಧಿಕಾರಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಡಿಸುತ್ತಿಲ್ಲ. ಈಗ ಮಂಡಳಿಯನ್ನು ವಜಾ ಮಾಡಿದ್ದೇವೆ ಎನ್ನುತ್ತಾರೆ’ ಎಂದು ಆರೋಪಿಸಿದರು.

‘ಸಂಘದಲ್ಲಿ ಆಡಳಿತ ಮಂಡಳಿ ಅಸ್ತಿತ್ವದಲ್ಲಿ ಇಲ್ಲದಿರುವುದರಿಂದ ಹಾಲು ಉತ್ಪಾದಕರಿಗೆ ತೊಂದರೆಗಳಾಗುತ್ತಿವೆ. ನಮ್ಮ ಸಂಕಷ್ಟಗಳನ್ನು ಕೇಳುವವರು ಇಲ್ಲದಾಗಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ವಿಚಾರಣೆನಡೆಸಿ, ಫಲಿತಾಂಶ ಘೋಷಿಸಬೇಕು’ ಎಂದು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಲೋಕೇಶ್ ಗೌಡ ಜಿ., ರಾಜ್ಯ ಮಾಧ್ಯಮ ಕಾರ್ಯದರ್ಶಿ ಮೋಹನ್ ರಾಜ್, ತಾಲ್ಲೂಕು ಅಧ್ಯಕ್ಷರಾದ ನಟರಾಜ್, ಜಯಣ್ಣ, ಮನು, ಜಗದೀಶ್, ರಾಮಸ್ವಾಮಿ, ಶೈಲಾ, ಬಸವರಾಜ್, ರುದ್ರೇಗೌಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-38-1004028240

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.