ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಜ.10ರಿಂದ (ಶನಿವಾರ) ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಶನಿವಾರ ಸಂಜೆ ಬೆಂಗಳೂರಿನಿಂದ ಬಂದು ವಾಸ್ತವ್ಯ ಹೂಡುವ ಅವರು, 11ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಸಂಜೆ 6.30ಕ್ಕೆ ಕುವೆಂಪುನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆಯಲಿರುವ ಪುರುಷರ ಕೊಕ್ಕೊ ರಾಜ್ಯಮಟ್ಟದ ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ಜ.12ರಂದು ಬೆಳಿಗ್ಗೆ 10.30ಕ್ಕೆ ಮೈಸೂರು–ಬೆಂಗಳೂರು ರಸ್ತೆಯ ಶ್ರೀಕ್ಷೇತ್ರ ಗ್ರಾಮೀಣಾಭಿವೃದ್ಧಿ ಮಾನವ ಸಂಪನ್ಮೂಲ ತರಬೇತಿ ಕೇಂದ್ರದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5.30ಕ್ಕೆ ರಂಗಾಯಣದಲ್ಲಿ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಉದ್ಘಾಟಿಸುವರು. 13ರಂದು ಮಧ್ಯಾಹ್ನ 12ರ ಸುಮಾರಿಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.