ಕೆ.ಆರ್.ನಗರ: ತಾಲ್ಲೂಕಿನ ಮೂಡಲುಕೊಪ್ಪಲು ಗ್ರಾಮ ಸಮಗ್ರ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಭರವಸೆ ನೀಡಿದರು.

ಗ್ರಾಮದಲ್ಲಿ ಶುಕ್ರವಾರ ನಡೆದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಕಾಂಕ್ರೀಟ್ ರಸ್ತೆ, ಬಾಕ್ಸ್ ಚರಂಡಿ ನಿರ್ಮಿಸಲು ಅಗತ್ಯ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.

ಕೆ.ಆರ್. ನಗರದಿಂದ ಮೂಡಲಕೊಪ್ಪಲು ಗ್ರಾಮಕ್ಕೆ ಸಂಪರ್ಕ ರಸ್ತೆ ಅಭಿವೃದ್ಧಿಗೊಳಿಸಲು ₹3 ಕೋಟಿ ಅನುದಾನ ಮಂಜೂರು ಆಗಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ಗ್ರಾಮದ ವಿಸ್ತೀರ್ಣ ಸರ್ವೆ ಮಾಡಿ ಚೆಕ್ಬಂದಿ ನಮೂದಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಶೀಲ್ದಾರ್ ಜಿ.ಸುರೇಂದ್ರ ಮೂರ್ತಿ, ತಾಲ್ಲೂಕು ಪಂಚಾಯಿತಿ ಇಒ ಕುಲದೀಪ್, ಗ್ಯಾರಂಟಿ ಯೋಜನೆಗಳ ಅನುಷ್ಠನಾ ಸಮಿತಿ ಅಧ್ಯಕ್ಷ ಎಂ.ಎಸ್.ಮಹದೇವ್, ಕಾಂಗ್ರೆಸ್ ವಕ್ತಾರ ಸಯ್ಯದ್ ಜಾಬೀರ್, ಮುಖಂಡರಾದ ಕಲ್ಲಹಳ್ಳಿ ಶ್ರೀನಿವಾಸ್, ಜಯಕುಮಾರ್, ಕೃಷ್ಣೇಗೌಡ, ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-38-531722578

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.