ಮೈಸೂರು: ‘ಸಂಗೀತ ಕ್ಷೇತ್ರದಲ್ಲಿ ಮೈಸೂರು ತನ್ನದೇ ಛಾಪು ಮೂಡಿಸಿದ್ದು, ಈ ಪರಂಪರೆಯನ್ನು ಸಂರಕ್ಷಿಸಬೇಕಿದೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ನಗರದ ಬಿಡಾರಂ ಕೃಷ್ಣಪ್ಪನವರ ಪ್ರಸನ್ನ ಸೀತಾರಾಮ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಸಂಗೀತ ಕಲಾನಿಧಿ ಮೈಸೂರು ವಾಸುದೇವಾಚಾರ್ಯರ 192ನೇ ಜನ್ಮದಿನೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

‘ಮೈಸೂರಿನ ಪರಂಪರೆಯೊಂದಿಗೆ ಇಲ್ಲಿನ ಇತಿಹಾಸ, ಸಂಸ್ಕೃತಿಯನ್ನು ಬಿಂಬಿಸುವ ಪಾರಂಪರಿಕತೆಯ ಪ್ರತೀಕವಾದ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾಗರಿಕರು ಕೈಜೋಡಿಸಬೇಕು’ ಎಂದು ಕೋರಿದರು.

‘ಮೈಸೂರು ಅರಮನೆಯೊಂದಿಗೆ ವಾಸುದೇವಾಚಾರ್ಯರು ಅವಿನಾಭಾವ ಸಂಬಂಧ ಹೊಂದಿದ್ದರು’ ಎಂದು ನೆನೆದರು. ಶಾಸಕ ಟಿ.ಎಸ್.ಶ್ರೀವತ್ಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್, ಟಿ.ಎಸ್.ಸತ್ಯವತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-37-1222863837

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.