ಮೈಸೂರು: ಜಿಲ್ಲಾಡಳಿತದಿಂದ ಜೂನ್ 4ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ರಾಜ್ಯಮಟ್ಟದ ಕಾರ್ಯಕ್ರಮವನ್ನು ಇಲ್ಲಿನ ಕಲಾಮಂದಿರದಲ್ಲಿ ಆಯೋಜಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅರ್. ಐಶ್ವರ್ಯ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ನಾಲ್ವಡಿ ಅವರು ನಾಡು ಕಂಡ ಅಪ್ರತಿಮ ಚೇತನ. ನೂರು ವರ್ಷಗಳ ಹಿಂದೆಯೇ ಕೈಗಾರಿಕೆ, ಶಿಕ್ಷಣ, ನೀರಾವರಿ, ಕೃಷಿಗೆ ಅವರು ನೀಡಿದ ಕೊಡುಗೆ ಅಪಾರವಾದುದು. ಅವರು ನೀಡಿದ ಕೊಡುಗೆ ಪ್ರತಿಯೊಬ್ಬರಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಜಯಂತಿ ಆಚರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಕೋರಿದರು.

‘ಮೆರವಣಿಗೆ ಅರಮನೆ ಆವರಣದಲ್ಲಿರುವ ಲಕ್ಷ್ಮಿನಾರಾಯಣಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಅಶ್ವಾರೋಹಿದಳ, ಪೊಲೀಸ್ ಬ್ಯಾಂಡ್, ಡೊಳ್ಳು ಕುಣಿತ ಮೊದಲಾದ ಕಲಾತಂಡಗಳು ಭಾಗವಹಿಸಲಿವೆ’ ಎಂದರು.

‘ನಾಲ್ವಡಿ ಕುರಿತು ಗೀತಗಾಯನ ಆಯೋಜಿಸಲಾಗುವುದು. 7ರಿಂದ 14 ವರ್ಷ ಹಾಗೂ 15ರಿಂದ 18 ವರ್ಷದ ಎರಡು ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲೆ, ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆ ಆಯೋಜಿಸಿ, ವಿಜೇತರಿಗೆ ಕಾರ್ಯಕ್ರಮ ದಿನದಂದು ಬಹುಮಾನ ವಿತರಿಸಲಾಗುವುದು’ ಎಂದು ತಿಳಿಸಿದರು.

‘ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು, ಉಪಾಹಾರದ ವ್ಯವಸ್ಥೆ ಮಾಡಬೇಕು. ಮೆರವಣಿಗೆ ಹಾಗೂ ವೇದಿಕೆ ಸಮಾರಂಭದ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ವಿವಿಧ ವೃತ್ತಗಳು ಹಾಗೂ ಶಾಲಾ– ಕಾಲೇಜುಗಳಲ್ಲಿ ನಾಲ್ವಡಿ ಅವರ ಸಾಕ್ಷ್ಯಚಿತ್ರ ಪ್ರದರ್ಶಿಸಬೇಕು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಾಲ್ವಡಿ ಜಯಂತಿ ಆಚರಿಸಬೇಕು’ ಎಂದು ಸಂಘ–ಸಂಸ್ಥೆಗಳ ಪ್ರತಿನಿಧಿಗಳು ಕೋರಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲಾ ಎಸ್.ಎಚ್., ಸಾಹಿತಿ ಪ್ರೊ.ಪಿ.ವಿ. ನಂಜರಾಜ ಅರಸು, ಕನ್ನಡ ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಎಸ್.ಕೆ. ರಾಜುಗೌಡ, ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಅಧ್ಯಕ್ಷ ಬಿ.ಎ. ಶಿವಶಂಕರ್, ಸೋಸಲೆ ಸಿದ್ದರಾಜು, ಗಾಯಕ ಜಯಶಂಕರ ಮೇಸ್ತ್ರಿ, ಹೋರಾಟಗಾರ ಅರವಿಂದ್ ಶರ್ಮಾ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-38-1935431512

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.