ಮೈಸೂರು: ಅರಸು ಮಂಡಳಿ ಸಂಘ ಹಾಗೂ ವಿವಿಧ ಅರಸು ಸಂಘ- ಸಂಸ್ಥೆಗಳ ಒಕ್ಕೂಟದಿಂದ ನಗರದ ಜಯಚಾಮರಾಜೇಂದ್ರ ಸ್ಕೂಲ್ ಫಾರ್ ಎಕ್ಸಲೆನ್ಸ್ನಲ್ಲಿ ಜೂನ್ 4ರಂದು ಬೆಳಿಗ್ಗೆ 10ಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜಯಂತ್ಯುತ್ಸವ ಆಚರಿಸಲಾಗುವುದು ಎಂದು ಮಂಡಳಿ ಅಧ್ಯಕ್ಷ ಶ್ರೀಕಾಂತ್ ರಾಜೇ ಆರಸ್ ಹೇಳಿದರು.

ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಬೆಳಿಗ್ಗೆ 9ಕ್ಕೆ ಜಯಚಾಮರಾಜೇಂದ್ರ ಸ್ಕೂಲ್ ಫಾರ್ ಎಕ್ಸಲೆನ್ಸ್ ಆವರಣದಿಂದ ಮೆರವಣಿಗೆ ಆರಂಭಗೊಳ್ಳಲಿದೆ. ಆರ್ಟಿಒ ವೃತ್ತ, ಅಗ್ರಹಾರ ವೃತ್ತ ಹಾಗೂ ಸಯ್ಯಾಜಿರಾವ್ ರಸ್ತೆ ಮೂಲಕ ಸಾಗಿ ಕೆ.ಆರ್.ವೃತ್ತದಲ್ಲಿ ಕೊನೆಗೊಳ್ಳಲಿದೆ’ ಎಂದರು.

‘ವೇದಿಕೆ ಕಾರ್ಯಕ್ರಮದ ಸಾನ್ನಿಧ್ಯವನ್ನು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವಹಿಸುವರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶ್ರೀಕಂಠ ಸಿದ್ಧಲಿಂಗ ರಾಜೇ ಅರಸ್ ಚಾಲನೆ ನೀಡುವರು. ಅತಿಥಿಗಳಾಗಿ ಶಾಸಕರಾದ ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ ಭಾಗವಹಿಸುವರು. ಜ್ಞಾನಾನಂದ ಚನ್ನರಾಜೇ ಅರಸ್, ವರುಣ್ ಲಿಂಗರಾಜೇ ಅರಸ್, ಬಿ.ಪಿ.ಭರತ್ ಅರಸ್ ಉಪಸ್ಥಿತರಿರುವರು’ ಎಂದು ತಿಳಿಸಿದರು.

‘ಕೈಗಾರಿಕಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ದೂರದೃಷ್ಟಿಯ ಆಡಳಿತಗಾರರಾದ ಅವರ ಜನ್ಮದಿನವನ್ನು ಸರ್ಕಾರ ರಾಜ್ಯ ಕೈಗಾರಿಕಾ ದಿನವನ್ನಾಗಿ ಘೋಷಿಸಿ ಆಚರಿಸಬೇಕು’ ಎಂದು ಆಗ್ರಹಿಸಿದರು.

ನವೀನ್ ರಾಜೇ ಅರಸ್, ಕೀರ್ತಿ ಪ್ರಕಾಶ್, ಮನೋಜ್ ರಾಜೇ ಅರಸ್, ಲಿಂಗರಾಜ್ ರಾಜೇ ಅರಸ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-39-318085106

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.