ಮೈಸೂರು: ‘ನಗರದ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿಜೀರ್ಣಾಂಗ ಮತ್ತು ಜಿಐ ಕ್ಯಾನ್ಸರ್ ಚಿಕಿತ್ಸೆಗೆಂದು ಸಮಗ್ರ ವಿಭಾಗ ತೆರೆಯಲಾಗಿದೆ’ ಎಂದು ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಮುಖ್ಯಸ್ಥ ಡಾ.ಅಶೋಕ್ ತಿಳಿಸಿದರು.

ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಲ್ಲೇ ಚಿಕಿತ್ಸೆ ಲಭ್ಯವಾಗುವುದರಿಂದ ಬೆಂಗಳೂರು ಮೊದಲಾದ ದೊಡ್ಡ ನಗರಗಳಿಗೆ ಹೋಗುವುದು ತಪ್ಪಲಿದೆ’ ಎಂದು ಹೇಳಿದರು.

‘ಜೀರ್ಣಾಂಗವ್ಯೂಹದ ಕ್ಯಾನ್ಸರ್ ಪ್ರಕರಣಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿವೆ. ತಡವಾಗಿ ತಪಾಸಣೆಗೆ ಬರುವುದು, ವೈದ್ಯರ ಸಲಹೆ ಪಡೆಯದೇ ಸ್ವಯಂ ಔಷಧಿ ತೆಗೆದುಕೊಂಡು ಸೇವಿಸುವುದು, ನಿರ್ಲಕ್ಷ್ಯವೇ ಇದಕ್ಕೆ ಕಾರಣ. ನಮ್ಮಲ್ಲಿ ಒಂದೇ ಸೂರಿನಡಿಯಲ್ಲಿ ಸಮಗ್ರ ಚಿಕಿತ್ಸೆ ನೀಡುವ ಉದ್ದೇಶದಿಂದ ಘಟಕ ಆರಂಭಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಡಾ.ಅಶೋಕ್, ಡಾ.ನಂದೀಶ್, ಡಾ.ದೇವರಾಜ ಆರ್., ಡಾ.ಸುಹಾಸ್ ಕೆ. ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-39-1307361949

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.