ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ ರೆಡ್ಡಿ ಅಧಿಕಾರ ಸ್ವೀಕಾರ

Published 5 ಜುಲೈ 2024, 5:05 IST
Last Updated 5 ಜುಲೈ 2024, 5:05 IST
ಅಕ್ಷರ ಗಾತ್ರ

ಮೈಸೂರು: ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ ರೆಡ್ಡಿ ಜಿ. ಅವರು ಇಲ್ಲಿ‌ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.

ಈವರೆಗೆ ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

ಲಕ್ಷ್ಮೀಕಾಂತ ರೆಡ್ಡಿ ಈವರೆಗೆ ಕೆಯುಐಡಿಎಫ್‌ಸಿ (ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ) ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅದಕ್ಕಿಂತ ಹಿಂದೆ ಮೈಸೂರು ಮಹಾನಗರಪಾಲಿಕೆಯ ಆಯುಕ್ತರಾಗಿ ಕೆಲಸ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT