ಮೈಸೂರು: ತಾಲ್ಲೂಕಿನ ಗುಡುಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಗುರುತಿಸಿರುವ ಫಲವತ್ತಾದ ಭೂಮಿ ಉಳಿಸಿಕೊಳ್ಳುವುದಕ್ಕಾಗಿ ನಡೆಯುತ್ತಿರುವ ಹೋರಾಟದ ಸ್ಥಳದಲ್ಲಿ ರಾಜ್ಯ ರೈತ ಸಂಘವು ಮೇ 4ರಂದು ಬೆಳಿಗ್ಗೆ 10.30ಕ್ಕೆ ಸಭೆ ಕರೆದಿದೆ.

‘ಗುಡುಮಾದನಹಳ್ಳಿ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಿಮ್ಹಾನ್ಸ್ ಆಸ್ಪತ್ರೆಯ ಭೂಮಿಯು ಫಲವತ್ತಾದುದಾಗಿದೆ. ಇದನ್ನು ರೈತರು 70 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದಾರೆ. ಅಲ್ಲದೆ ಈ ಭೂಮಿಯು ಹಸಿರು ವಲಯವಾಗಿದ್ದು, 5 ಅಂತಸ್ತಿನ ಕಟ್ಟಡ ಕಟ್ಟುವುದಕ್ಕೆ ಸೂಕ್ತವಾದುದಲ್ಲ. ಈ ಯೋಜನೆಯನ್ನು ಪಕ್ಕದಲ್ಲಿರುವ ಹೊಸಹುಂಡಿ, ಚೋರನಹಳ್ಳಿ, ಹಡಜನ, ವಾಜಮಂಗಲ ಗ್ರಾಮಗಳಲ್ಲಿನ ವ್ಯವಸಾಯಕ್ಕೆ ಯೋಗ್ಯವಲ್ಲದ ಸರ್ಕಾರಿ ಭೂಮಿಗೆ ಸ್ಥಳಾಂತರಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಗಿದೆ. ಹೋರಾಟಗಾರರು, ಪ್ರಗತಿಪರ ಸಂಘಟನೆಗಳವರು ಪಾಲ್ಗೊಳ್ಳಬೇಕು ಎಂದು ರಾಜ್ಯ ರೈತ ಸಂಘದ ಮೈಸೂರು ವಿಭಾಗೀಯ ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-38-1835963630

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.