ಮೈಸೂರು: ತಾಲ್ಲೂಕಿನ ಗುಡುಮಾದನಹಳ್ಳಿಯಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ (ನಿಮ್ಹಾನ್ಸ್) ಸಂಸ್ಥೆಯ ಮಾದರಿ ಆಸ್ಪತ್ರೆಯ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪೌರ ಕಾರ್ಮಿಕರ ಸಂಘಟನೆಗಳ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ಡಿ.ಆರ್.ರಾಜು ಮಾತನಾಡಿ, ‘ಸರ್ಕಾರ ಬೆಂಗಳೂರು ಮಾದರಿಯಲ್ಲಿ ಮೈಸೂರು ಭಾಗದಲ್ಲಿಯೂ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿರುವುದು ಸ್ವಾಗತಾರ್ಹ. ಇದಕ್ಕಾಗಿ 2025- 26ನೇ ಸಾಲಿನ ಆಯವ್ಯಯದಲ್ಲಿ ₹100 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಆದರೆ ಕೆಲವರ ಒತ್ತಡಕ್ಕೆ ಮಣಿದು ಕಾಮಗಾರಿ ವಿಳಂಬ ಮಾಡುತ್ತಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಗುಡುಮಾದನಹಳ್ಳಿಯ ಸರ್ವೆ ನಂ. 8, 60, 68ರಲ್ಲಿ ಸುಮಾರು 20 ಎಕರೆ ಸರ್ಕಾರಿ ಜಾಗವಿದೆ. ಹಲವಾರು ಮಂದಿ ಇದರಲ್ಲಿ ವ್ಯವಸಾಯ ಮಾಡಿ ಈಗಾಗಲೇ ಸಾಕಷ್ಟು ಸಂಪಾದನೆ ಮಾಡಿಕೊಂಡಿದ್ದಾರೆ. ಹೀಗಾಗಿ ನಿಜಕ್ಕೂ ಇವರು ಬಡವರಾಗಿದ್ದರೆ ಬೇರೆ ಕಡೆ ಜಾಗ ಕೊಡಲಿ. ಆದರೆ ಇದೇ ಜಾಗದಲ್ಲಿ ನಿಮ್ಹಾನ್ಸ್ ನಿರ್ಮಾಣವಾಗಬೇಕು’ ಎಂದು ಆಗ್ರಹಿಸಿದರು.

‘ಈ ಆಸ್ಪತ್ರೆ ನಿರ್ಮಾಣವಾದರೆ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಈಗಾಗಲೇ ಆರೋಗ್ಯ ಇಲಾಖೆಗೆ ಭೂಮಿ ಹಸ್ತಾಂತರ ಆಗಿರುವುದರಿಂದ ಯಾವುದೇ ಒತ್ತಡ, ಪ್ರತಿಭಟನೆಗಳಿಗೂ ಮಣಿಯದೆ ಕೂಡಲೇ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭಿಸಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ದಿನೇಶ್ಕುಮಾರ್, ಸಲಹೆಗಾರ ಶಿವ ಶ್ರೀನಿವಾಸ್, ಸಿ.ಆರ್.ವಿಜಯ್, ಅಂಜಲಿ, ವಸಂತಕುಮಾರಿ, ಪವಿತ್ರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-1878941789

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.