ಮೈಸೂರು: ‘ಶುಶ್ರೂಷಕರು ಆರೋಗ್ಯ ಕ್ಷೇತ್ರದ ಬೆನ್ನೆಲುಬು ಇದ್ದಂತೆ’ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಹೇಳಿದರು.

ನಗರದ ಜೆಎಸ್ಎಸ್ ಆಸ್ಪತ್ರೆಯ ರಾಜೇಂದ್ರ ಶತಮಾನೋತ್ಸವ ಭವನದಲ್ಲಿ ಜೆಎಸ್ಎಸ್ ವಿದ್ಯಾಪೀಠ, ಜೆಎಸ್ಎಸ್ ಕಾಲೇಜ್ ಆಫ್ ನರ್ಸಿಂಗ್, ಜೆಎಸ್ಎಸ್ ಸ್ಕೂಲ್ ಆಫ್ ನರ್ಸಿಂಗ್ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ‘ವಿಶ್ವ ಶುಶ್ರೂಷಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆರೋಗ್ಯ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುವ ಶುಶ್ರೂಷಕರು ಪ್ರಮುಖರಾಗಿದ್ದು, ಸಂಕಷ್ಟದಲ್ಲಿರುವ ರೋಗಿಗಳನ್ನು ಆರೈಕೆ ಮಾಡುವ ಕಾರ್ಯ ಮಹತ್ವದ್ದಾಗಿದೆ’ ಎಂದರು.

‘ಶುಶ್ರೂಷಕರು ಇಲ್ಲದೆ ಆರೋಗ್ಯ ಕ್ಷೇತ್ರ ಅಸಾಧ್ಯವಾಗಿದ್ದು, ಇದನ್ನು ಕೋವಿಡ್ ಸಂದರ್ಭದಲ್ಲಿ ನೋಡಿದ್ದೇವೆ. ಇಂದು ಸಮಾಜದಲ್ಲಿ ಅವರನ್ನು ಗುರುತಿಸುವ ಕೆಲಸವಾಗುತ್ತಿದೆ. ಇದು ಶ್ಲಾಘನೀಯ’ ಎಂದು ತಿಳಿಸಿದರು.

‘ರೋಗಿಗೆ ವೈದ್ಯರು ನೀಡುವ ಚಿಕಿತ್ಸೆ ಎಷ್ಟು ಮುಖ್ಯವೋ, ಚಿಕಿತ್ಸೆ ನಂತರದ ಆರೈಕೆಯೂ ಅಷ್ಟೆ ಮುಖ್ಯ. ರೋಗಿಗಳ ಆರೈಕೆಯಲ್ಲಿ ವೈದ್ಯರಿಗಿಂತ ಹೆಚ್ಚಿನ ಪಾತ್ರವನ್ನು ಶುಶ್ರೂಷಕರು ವಹಿಸುವವರು. ಕೇವಲ ಆರೋಗ್ಯ ಸೇವೆ ನೀಡುವವರು ಮಾತ್ರವಲ್ಲ, ಮಾನವೀಯತೆಯ ರಕ್ಷಕರು’ ಎಂದು ಅಭಿಪ್ರಾಯಪಟ್ಟರು.

‘ನರ್ಸ್ಗಳ ಸೇವೆ ತಾಯಿ ಆರೈಕೆಯಂತಿರುತ್ತದೆ. ವೈದ್ಯಕೀಯ ಸೇವೆಯಲ್ಲಿ ನರ್ಸಿಂಗ್ ಕ್ಷೇತ್ರದಲ್ಲಿ ಪ್ರಗತಿ ಕಾಣುವ ಮೂಲಕ ಎಲ್ಲರೂ ಆರೋಗ್ಯ ಸೇವೆಯಲ್ಲಿ ತೊಡಗುವುದು ಮುಖ್ಯವಾಗಬೇಕು’ ಎಂದು ಸಲಹೆ ನೀಡಿದರು.

‘ನರ್ಸಿಂಗ್ ವೃತ್ತಿಯು ಪ್ರಸ್ತುತ ಮತ್ತು ಭವಿಷ್ಯದಲ್ಲಿ ಅತ್ಯಂತ ಹೆಚ್ಚಿನ ಬೇಡಿಕೆ ಹೊಂದಿರುವ ಉದ್ಯೋಗಗಳಲ್ಲಿ ಒಂದಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆ, ವಯಸ್ಸಾದವರ ಆರೈಕೆ ಮತ್ತು ಆರೋಗ್ಯ ರಕ್ಷಣಾ ಮೂಲಸೌಕರ್ಯಗಳ ವಿಸ್ತರಣೆಯಿಂದಾಗಿ ಈ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ನಿರಂತರವಾಗಿ ಹೆಚ್ಚುತ್ತಿವೆ’ ಎಂದು ತಿಳಿಸಿದರು.

ಮೃತ್ಯುಂಜಯಪ್ಪ ಮ್ಯಾನೇಜಿಂಗ್ ಟ್ರಸ್ಟಿ ಸುಧಾ ಮೃತ್ಯುಂಜಯಪ್ಪ ಮಾತನಾಡಿ, ‘ಫ್ಲಾರೆನ್ಸ್ ನೈಟಿಂಗೇಲ್ ಅವರು ಮಾಡಿದ ಸೇವೆ ವಿಶ್ವಕ್ಕೆ ಮಾದರಿಯಾಗಿದೆ. ನರ್ಸಿಂಗ್ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಶುಶ್ರೂಷಕರು ಅವರನ್ನು ಮಾದರಿಯಾಗಿಸಿಕೊಳ್ಳಬೇಕು’ ಎಂದರು.

ಸಮಾರಂಭದಲ್ಲಿ ನರ್ಸಿಂಗ್ ಕ್ಷೇತ್ರದಲ್ಲಿ ಉತ್ತಮ ಸೇವೆ ನೀಡಿದವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಸಿ.ಜಿ.ಬೆಟಸೂರಮಠ ವಹಿಸಿದ್ದರು. ಜೆಎಸ್ಎಸ್ ಆಸ್ಪತ್ರೆ ನಿರ್ದೇಶಕ ಸಿ.ಪಿ.ಮಧು, ವೈದ್ಯಕೀಯ ಶಿಕ್ಷಣ ವಿಭಾಗ ನಿರ್ದೇಶಕ ಆರ್.ಮಹೇಶ್, ಜೆಎಸ್ಎಸ್ ಆಸ್ಪತ್ರೆ ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಜಾನೆಟ್ ಮಥಿಯಾಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-39-1095022429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.