ಮೈಸೂರು: ಇಲ್ಲಿನ ಪಡುವಾರಹಳ್ಳಿ ವ್ಯಾಪ್ತಿಯಲ್ಲಿ ಅಂದಾಜು ₹8 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಹರೀಶ್ ಗೌಡ ಪಡುವಾರಹಳ್ಳಿಯ ಮಹದೇಶ್ವರ ದೇವಸ್ಥಾನದ ಎದುರು ಭಾನುವಾರ ಭೂಮಿಪೂಜೆ ನೆರವೇರಿಸಿದರು.

ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಲ್ಲಿ (ಸಿಎಂಐಡಿಪಿ) ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾಗಿರುವ ₹50 ಕೋಟಿ ಅನುದಾನ ಹಾಗೂ ಪಾಲಿಕೆಯ ಶೇ 24.10 ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

‘ರಾಮಮಂದಿರ ಹಿಂಭಾಗ, ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಮಾರಿಗುಡಿ ಸಮೀಪದ ರಸ್ತೆ, ಚರಂಡಿಗಳು, ಒಂಟಿಕೊಪ್ಪಲ್ ಅಡ್ಡರಸ್ತೆಗಳು, ವಾಲ್ಮೀಕಿ ರಸ್ತೆ, ಅಂಬೇಡ್ಕರ್ ಕಾಲೊನಿಯ ಅಡ್ಡ ರಸ್ತೆಗಳು ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ ಹೀಗೆ ಹಲವು ಕಾಮಗಾರಿಗಳು ಇದರಲ್ಲಿ ಒಳಗೊಂಡಿದೆ’ ಎಂದು ತಿಳಿಸಿದರು.

ಇಂದಿರಾ ಗಾಂಧಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು, ದೇವರಾಜ ಬ್ಲಾಕ್ ಅಧ್ಯಕ್ಷ ಡಿ.ನಾಗಭೂಷಣ್, ಯುವ ಘಟಕದ ಅಧ್ಯಕ್ಷ ನಿಶಾಂತ್ ಪಟೇಲ್, ಮುಖಂಡರಾದ ರಾಜೇಶ್ವರಿ ಪುಟ್ಟಸ್ವಾಮಿ, ಮೋದಾಮಣಿ, ಪುಷ್ಪಲತಾ ಚಿಕ್ಕಣ್ಣ, ಭಾಗ್ಯ ಮಹದೇಶ್, ರಮೇಶ್, ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಜೆ.ಯೋಗೇಶ್, ಮೈಸೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಮಹದೇಶ್, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ, ಪಡುವಾರಹಳ್ಳಿ ಗ್ರಾಮಭ್ಯುದಯ ಟ್ರಸ್ಟ್ನ ಮೆಲ್ಲಹಳ್ಳಿ ಮಹದೇವಸ್ವಾಮಿ, ಭೈರಪ್ಪ, ಕುಮಾರ್, ಸೌಭಾಗ್ಯ, ತಿಮ್ಮಯ್ಯ, ಟಿ.ಕುಮಾರ್, ಸೊಂಪಾನ್ ದೇವ್, ಕೃಪಾನಂದ, ಸುಮಾ ನಾಗರಾಜ್, ಮಾಯಣ್ಣ, ನಟರಾಜ್, ಬಸವರಾಜ್, ಶ್ರೀಕಂಠು, ಜಗದೀಶ್, ಕಿರಣ್, ಅರುಣ್, ಒಂಟಿಕೊಪ್ಪಲು ಗುರುರಾಜ್, ಕುಮಾರ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಶೀಲಾ ಮರಿಗೌಡ, ಚಂದ್ರಕಲಾ, ಉಷಾ ಭಾಗಿಯಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-39-1119861518

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.