ಮೈಸೂರು: ‘ಆರಂಭಿಕ ರೋಗ ನಿರ್ಣಯದಿಂದ ಪಾರ್ಕಿನ್ಸನ್ ಕಾಯಿಲೆಯನ್ನು ಸುಧಾರಿಸಬಹುದು’ ಎಂದು ಜೆಎಸ್ಎಸ್ ಆಸ್ಪತ್ರೆ ನಿರ್ದೇಶಕ ಡಾ.ಸಿ.ಪಿ.ಮಧು ತಿಳಿಸಿದರು.

ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಈಚೆಗೆ ಆಯೋಜಿಸಿದ್ದ ವಿಶ್ವ ಪಾರ್ಕಿನ್ಸನ್ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು, ಆರಂಭಿಕ ರೋಗನಿರ್ಣಯವನ್ನು ಉತ್ತೇಜಿಸಲು ಮತ್ತು ರೋಗಿಗಳಿಗೆ ಉತ್ತಮ ಆರೈಕೆ ವ್ಯವಸ್ಥೆಯನ್ನು ಒದಗಿಸುವುದು ಈ ದಿನದ ಉದ್ದೇಶ ಎಂದರು.

ನರ ಸಂಬಂಧಿತ ಕಾಯಿಲೆಯ ರೋಗಿಗಳ ಜೀವನದ ಗುಣಮಟ್ಟ ಸುಧಾರಿಸುವಲ್ಲಿ ಜೆಎಸ್ಎಸ್ ಆಸ್ಪತ್ರೆ ಶ್ರಮಿಸುತ್ತಿದೆ ಎಂದು ಹೇಳಿದರು.

ನ್ಯೂರಾಲಜಿ ವಿಭಾಗದ ಮುಖ್ಯಸ್ಥ ಡಾ.ಎಸ್.ಹರ್ಷ ಮಾತನಾಡಿ, ‘ಪಾರ್ಕಿನ್ಸನ್ ಕಾಯಿಲೆಯು ನರಮಂಡಲದ ಚಲನೆಯ ಅಸ್ವಸ್ಥತೆಯಾಗಿದ್ದು, ಇದು ಕಾಲಾನಂತರದಲ್ಲಿ ತೊಂದರೆ ನೀಡುತ್ತದೆ’ ಎಂದರು.

ನ್ಯೂರಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ನೇಮಿಚಂದ್ರ, ಸಹಾಯಕ ಪ್ರಾಧ್ಯಾಪಕ ಡಾ.ಶಸ್ತಾರ ಪಿ. ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-39-660137764

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.