ಮೈಸೂರು: ‘ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿರುವುದು ರೈತರಿಗೆ ದೊಡ್ಡ ಹೊಡೆತ ನೀಡಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೆರಿಗೆ ಇಳಿಸಬೇಕು’ ಎಂದು ವಿಶ್ವಮಾನವ ರೈತ ಸಂಘದ ರಾಜ್ಯಾಧ್ಯಕ್ಷ ಮೋಹಿತ್ಗೌಡ ಆಗ್ರಹಿಸಿದರು.

ಇಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಅಗತ್ಯ ವಸ್ತುಗಳ ದರ ಏರಿಕೆಗೂ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು.

‘ಸರ್ಕಾರಿ ಕಚೇರಿಗಳಿಗೆ ರೈತರು ಕೆಲಸಕ್ಕೆಂದುಬಂದಾಗ ಅಧಿಕಾರಿಗಳು, ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಕೆಲಸ ಮಾಡಿಕೊಡಲು ಅನಗತ್ಯವಾಗಿ ಅಲೆದಾಡಿಸಬಾರದು’ ಎಂದು ಒತ್ತಾಯಿಸಿದರು.

‘ಎಚ್.ಡಿ. ಕೋಟೆ, ನಂಜನಗೂಡು, ಸರಗೂರು, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲ್ಲೂಕುಗಳಲ್ಲಿಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ರೈತರ ಮೇಲೆ ದಾಳಿ ಮಾಡುವುದಲ್ಲದೆ, ಬೆಳೆ ಹಾನಿಯನ್ನೂ ಉಂಟು ಮಾಡುತ್ತಿವೆ. ಹೀಗಾಗಿ, ಇದರ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಪದಾಧಿಕಾರಿಗಳಾದ ಕೆ. ಶಂಕರ್, ಸಂದೇಶ್ ಪವಾರ್, ಹಳ್ಳಿಕಾರ್ ದರ್ಶನ್, ಅಭಿಷೇಕ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-39-116250243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.