ಮೈಸೂರು: ‘ನಮ್ಮ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳು ಸಮರ್ಪಕವಾಗಿ ಲಭ್ಯವಿದೆ. ಯಾವುದೇ ಕೊರತೆ ಇಲ್ಲ’ ಎಂದು ಮೈಸೂರು ಪೆಟ್ರೋಲಿಯಂ ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷರಾದ ಶಶಿಕಲಾ ನಾಗರಾಜ್ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭಾರತ ಸರ್ಕಾರ, ಪೆಟ್ರೋಲಿಯಂ ಮತ್ತು ಪ್ರಕೃತಿ ಅನಿಲ ಸಚಿವಾಲಯ ಹಾಗೂ ಎಲ್ಲಾ ಆಯಿಲ್ ಮಾರ್ಕೆಟಿಂಗ್ ಕಂಪನಿಗಳಿಂದ ಸಂಪೂರ್ಣ ಸಹಕಾರ ಮತ್ತು ನಿರಂತರ ಪೂರೈಕೆ ದೊರೆಯುತ್ತಿದೆ. ಎಲ್ಲಾ ಪೆಟ್ರೋಲ್ ಬಂಕ್ಗಳಲ್ಲಿ ಸರಾಗವಾಗಿ ಇಂಧನ ಲಭ್ಯವಾಗುತ್ತಿದೆ. ಹಾಗಾಗಿ ಯಾರೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ’ ಎಂದು ತಿಳಿಸಿದರು.

‘ಒಕ್ಕೂಟದ ಡೀಲರ್ಗಳು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ನಿರಂತರವಾಗಿ ಶ್ರಮಿಸುತ್ತಿದ್ದು, ಅಗತ್ಯ ಸೇವೆ ಒದಗಿಸಲು ಬದ್ಧವಾಗಿದ್ದಾರೆ’ ಎಂದರು.

‘ಸಾರ್ವಜನಿಕರು ಅವಸರದಲ್ಲಿ ಇಂಧನ ಖರೀದಿ ಮಾಡುವುದನ್ನು ನಿಲ್ಲಿಸಬೇಕು. ಅನಾವಶ್ಯಕವಾಗಿ ಇಂಧನ ಸಂಗ್ರಹಿಸಿಕೊಳ್ಳುವುದು ಕಾನೂನು ಬಾಹಿರ. ಅಸುರಕ್ಷಿತ ಪಾತ್ರೆಗಳಲ್ಲಿ ಇಂಧನ ಸಂಗ್ರಹಿಸುವುದರಿಂದ ದೊಡ್ಡ ಅಗ್ನಿ ಅಪಾಯಕ್ಕೆ ಕಾರಣವಾಗಬಹುದು’ ಎಂದು ತಿಳಿಸಿದರು.

ಮನೋಜ್ಕುಮಾರ್, ಮಂಜಿತ್ ಹೆಗಡೆ, ಬಸವೇಗೌಡ, ಲೋಕೇಶ್, ಭಗವಾನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-39-1308659476

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.