ಪಿರಿಯಾಪಟ್ಟಣ: ‘ವಕೀಲರು ಉತ್ತಮ ಸಹಕಾರ ನೀಡಿದರೆ ಶೀಘ್ರವಾಗಿ ನ್ಯಾಯದಾನ ಮಾಡಲು ಸಾಧ್ಯವಾಗುತ್ತದೆ’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಧನುರಾಜ್ ತಿಳಿಸಿದರು.

ಪಟ್ಟಣದ ವಕೀಲರ ಭವನದಲ್ಲಿ ಸೋಮವಾರ ಹೊಸದಾಗಿ ಬಂದ ನ್ಯಾಯಾಧೀಶರಿಗೆ ಏರ್ಪಡಿಸಿದ್ದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು. ‘ನಾನು ಹಿಂದೆ ಕಾರ್ಯನಿರ್ವಹಿಸಿದ ಎಲ್ಲಾ ಕಡೆಗಳಲ್ಲಿ ವಕೀಲರು ಅಗತ್ಯ ಸಹಕಾರ ನೀಡಿದ್ದಾರೆ, ಇಲ್ಲಿಯೂ ಅದೇ ಸಹಕಾರ ನಿರೀಕ್ಷಿಸುತ್ತಿದ್ದೇನೆ’ ಎಂದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎ.ಎಸ್. ವಿದ್ಯಾ ಮಾತನಾಡಿ, ‘ಬಾರ್ ಆ್ಯಂಡ್ ಬೆಂಚ್ ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಆದ್ದರಿಂದ ಯಾವುದೇ ರೀತಿಯ ಸಂಘರ್ಷಕ್ಕೆ ಎಡೆಯಾಗದಂತೆ ಸಹಕಾರ ನೀಡಬೇಕು’ ಎಂದು ವಕೀಲರ ಸಂಘಕ್ಕೆ ಮನವಿ ಮಾಡಿದರು.

ಸಿವಿಲ್ ಹಿರಿಯ ಶ್ರೇಣಿ ನ್ಯಾಯಾಧೀಶ ಎಂ. ರಾಜು ಮಾತನಾಡಿ, ‘ಪಿರಿಯಾಪಟ್ಟಣದಲ್ಲಿ ವಕೀಲರ ಸಂಘ ಸಣ್ಣದಾಗಿದ್ದರೂ ವಕೀಲರು ಸಹೋದರರಂತೆ ಪ್ರೀತಿ ತೋರಿಸಿ ಕೆಲಸ ಮಾಡಲು ಸಹಕಾರ ನೀಡುತ್ತಿದ್ದಾರೆ. ಅದೇ ಸಹಕಾರವನ್ನು ಹೊಸದಾಗಿ ಆಗಮಿಸಿರುವ ನ್ಯಾಯಾಧೀಶರುಗಳಿಗೂ ನೀಡುತ್ತಾರೆ’ ಎಂದು ಭರವಸೆ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಧನಪಾಲ್ ಮಾತನಾಡಿ, ‘ಈ ಹಿಂದೆ ಕಾರ್ಯನಿರ್ವಹಿಸಿದ ನ್ಯಾಯಾಧೀಶರುಗಳ ರೀತಿಯಲ್ಲಿ ಕಕ್ಷಿದಾರ ಹಿತಾಸಕ್ತಿಯನ್ನು ಪರಿಗಣಿಸಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದರಲ್ಲದೆ, ವಕೀಲರ ಸಂಘದಿಂದ ಅಗತ್ಯ ಸಹಕಾರ ನೀಡಿ ಶೀಘ್ರ ನ್ಯಾಯದಾನಕ್ಕೆ ಎಲ್ಲಾ ರೀತಿಯಲ್ಲಿ ಸಹಕರಿಸುತ್ತೇನೆ’ ಎಂದು ಭರವಸೆ ನೀಡಿದರು.

ಹಿರಿಯ ವಕೀಲ ಗೋವಿಂದ ಗೌಡ ಮಾತನಾಡಿದರು. ವಕೀಲರ ಸಂಘದ ಕಾರ್ಯದರ್ಶಿ ಶಂಕರ್, ಉಪಾಧ್ಯಕ್ಷ ಚಂದ್ರೇಗೌಡ, ಸರ್ಕಾರಿ ಸಹಾಯಕ ಅಭಿಯೋಜಕರುಗಳಾದ ಶಿವಶಂಕರ್ ಗಾವಂಕರ್, ಜಾನಕಿ, ಉಮಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-38-745676415

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.