ಮೈಸೂರು: ಇಲ್ಲಿನ ಮಹಾನಗರಪಾಲಿಕೆಯಿಂದ ‘ನಿಷೇಧಿತ ಪ್ಲಾಸ್ಟಿಕ್ ಬಳಕೆ ಹಾಗೂ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾರ್ಯಾಚರಣೆ’ ಮುಂದುವರಿಸಲಾಗಿದೆ. ಆಯುಕ್ತ ಶೇಖ್ ತನ್ವೀರ್ ಅಸೀಫ್ ಅವರ ನಿರ್ದೇಶನದಂತೆ, ಘನ ತ್ಯಾಜ್ಯ ನಿರ್ವಹಣಾ ನಿಯಮಗಳು 2016ರ ಪ್ರಕಾರ ನಗರ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಲಾಗುತ್ತಿದೆ.

ಗುರುವಾರ ನಗರಪಾಲಿಕೆಯ ವಿವಿಧ ವಲಯಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ವಾಣಿಜ್ಯ ಸಂಸ್ಥೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ತ್ಯಾಜ್ಯ ನಿರ್ವಹಣಾ ವಿಧಾನಗಳ ಕುರಿತು ಪರಿಶೀಲಿಸಲಾಯಿತು. ಈ ವೇಳೆ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಯಿತು ಹಾಗೂ ಜಾಗೃತಿ ಮೂಡಿಸಲಾಯಿತು.

ವಲಯ 1ರಲ್ಲಿ ₹ 4ಸಾವಿರ, 2 ರಲ್ಲಿ ₹ 45ಸಾವಿರ, 3ರಲ್ಲಿ ₹ 12ಸಾವಿರ, 4ರಲ್ಲಿ ₹ 45ಸಾವಿರ, 6ರಲ್ಲಿ ₹ 60ಸಾವಿರ, 7ರಲ್ಲಿ ₹ 15,300, 8ರಲ್ಲಿ ₹ 9,800 ಹಾಗೂ ವಲಯ 9ರಲ್ಲಿ ₹ 14,600 ಸೇರಿ ಒಟ್ಟು ₹ 2,15,200 ದಂಡ ವಿಧಿಸಲಾಯಿತು.

ಪಾಲಿಕೆಯ ಆರೋಗ್ಯ ನಿರೀಕ್ಷಕರಾದ ಶಶಿ, ಪ್ರವೀಣ್, ಅಶ್ವತ್, ಶೀಲಾ, ಮಂಜು ಕುಮಾರ್, ಕೃಷ್ಣ, ಅಶೋಕ್, ನಮ್ರತಾ, ಶ್ರೀನಿಧಿ, ರಾಜೇಶ್ವರಿ, ಪ್ರಕಾಶ್, ಹರೀಶ್, ಸೋಮಶೇಖರ್, ಮಂಜುನಾಥ್ ಹಾಗೂ ರವಿಶಂಕರ್, ಪರಿಸರ ಎಂಜಿನಿಯರ್ಗಳಾದ ಜ್ಯೋತಿ, ಮಹಾದೇವಿ, ಶ್ರೀದೇವಿ ಹಾಗೂ ಮೈತ್ರಿ ಪಾಲ್ಗೊಂಡಿದ್ದರು. ಎಲ್ಲಾ ವಾಣಿಜ್ಯ ಸಂಸ್ಥೆಗಳು ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ತಕ್ಷಣ ನಿಲ್ಲಿಸಬೇಕು. ಘನ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದೆ’ ಎಂದು ಆಯುಕ್ತ ಶೇಖ್ ತನ್ವೀರ್ ಆಸೀಫ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-39-2136276643

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.