ಮೈಸೂರು: ‘ವಿದ್ಯುತ್ ದರ ಏರಿಕೆಯಾಗಿರುವ ಕಾರಣ ಪಿಎಂ ಸೂರ್ಯಘರ್ ಯೋಜನೆಯಡಿ ಮನೆಗಳ ಚಾವಣಿ ಮೇಲೆ ಸೌರಶಕ್ತಿ ಫಲಕ ಅಳವಡಿಸಿಕೊಳ್ಳುವುದರಿಂದ ವಾರ್ಷಿಕ ₹25 ಸಾವಿರ ಉಳಿತಾಯ ಸಾಧ್ಯ. ಯೋಜನೆ ಬಗ್ಗೆ ಜಾಗೃತಿ ಅಗತ್ಯ’ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ ನಿತೇಶ್ ಪಾಟೀಲ್ ಹೇಳಿದರು.

ವಿಜಯನಗರದ ಸೆಸ್ಕ್ ಕಚೇರಿಯಲ್ಲಿ ಮಂಗಳವಾರ ನಡೆದ ಅಧಿಕಾರಿಗಳು ಮತ್ತು ಪೂರೈಕೆದಾರರ ಸಭೆಯಲ್ಲಿ ಮಾತನಾಡಿ, ‘ಹೆಚ್ಚಿನ ಗ್ರಾಹಕರು ಯೋಜನೆಯ ಸೌಲಭ್ಯ ಪಡೆಯುವಂತೆ ಅಧಿಕಾರಿಗಳು ಹಾಗೂ ಪೂರೈಕೆದಾರರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

‘2024ರಲ್ಲಿಯೇ ಯೋಜನೆ ಜಾರಿಗೊಂಡಿದ್ದರೂ ಈವರೆಗೂ ನಿರೀಕ್ಷಿತ ಅರ್ಜಿಗಳು ಬಂದಿಲ್ಲ. ಯೋಜನೆಯ ಅನುಷ್ಠಾನಕ್ಕೆ ಸರ್ಕಾರದಿಂದ ಸಬ್ಸಿಡಿ ಸೌಲಭ್ಯವಿದ್ದು, ಗ್ರಾಹಕರಿಗೆ ಲಾಭದಾಯಕವಾಗಿದೆ. ನಾಗರಿಕರು ಸೌರಫಲಕ ಅಳವಡಿಸಿಕೊಂಡರೆ ತಮ್ಮ ಮನೆಗೆ ಬೇಕಾದಷ್ಟು ವಿದ್ಯುತ್ ಅನ್ನು ಪಡೆಯಬಹುದಾಗಿದೆ. ಹಾಗೆಯೇ ಹೆಚ್ಚುವರಿಯಾದ ವಿದ್ಯುತ್ ಅನ್ನು ಸೆಸ್ಕ್ಗೆ ಮಾರಾಟ ಮಾಡಿ ಆದಾಯ ಕೂಡಾ ಗಳಿಸಬಹುದಾಗಿದೆ’ ಎಂದರು.

‘ಗ್ರಾಹಕರಿಗೆ ವೆಂಡರ್ಗಳ ಮಾಹಿತಿ ಸುಲಭವಾಗಿ ದೊರೆಯುವ ವ್ಯವಸ್ಥೆ ಆಗಬೇಕು. ಅದರಿಂದ ಗ್ರಾಹಕರು ತಮ್ಮ ಅಗತ್ಯತೆಗೆ ಅನುಗುಣವಾಗಿ ಪೂರೈಕೆದಾರರನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಸೋಲಾರ್ ರೂಫ್ಟಾಪ್ ಅಳವಡಿಕೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ ಕೂಡಲೇ ಸೆಸ್ಕ್ ಅಧಿಕಾರಿಗಳು ಅರ್ಜಿ ಪರಿಶೀಲಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ನಡೆಸಬೇಕು’ ಎಂದು ಸೂಚಿಸಿದರು.

‘ಪೂರೈಕೆದಾರರು ಅರ್ಜಿ ಪರಿಶೀಲನೆಯಾದ ಐದು ದಿನಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಸೇರಿದಂತೆ ಸಂಬಂಧಿಸಿದ ಎಲ್ಲ ಕೆಲಸ ಮುಗಿಸಬೇಕು. ಸೋಲಾರ್ ರೂಫ್ಟಾಪ್ ಅಳವಡಿಸಿಕೊಳ್ಳಲು ಗ್ರಾಹಕರಿಗೆ ವಿಶ್ವಾಸ ಮೂಡಿಸಬೇಕು’ ಎಂದರು.

‘ಗ್ರಾಹಕರು ಪೂರೈಕೆದಾರರನ್ನು ಆಯ್ಕೆ ಮಾಡದಿರುವುದು; ಯೋಜನೆ ಕುರಿತು ಸಮರ್ಪಕ ಅರಿವು ಇಲ್ಲದಿರುವುದು ಕಾಣುತ್ತದೆ. ಅಂಥ ಗ್ರಾಹಕರನ್ನು ಸಂಪರ್ಕಿಸಿ ಯೋಜನೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಪಾಲಿಕೆ, ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಯೋಜನೆ ಜಾರಿಗೊಳಿಸಬೇಕು’ ಎಂದರು.

ಸೆಸ್ಕ್ ತಾಂತ್ರಿಕ ನಿರ್ದೇಶಕಿ ಶರಣಮ್ಮ ಎಸ್. ಜಂಗಿನ, ಮುಖ್ಯ ಎಂಜಿನಿಯರ್ ಎಲ್.ಲೋಕೇಶ್, ಸೂಪರಿಂಟೆಂಡೆಂಟ್ ಎಂಜಿನಿಯರ್ಗಳಾದ ಸುನೀಲ್ ಕುಮಾರ್, ಸೋಮಶೇಖರ್, ಪ್ರಧಾನ ವ್ಯವಸ್ಥಾಪಕ ಎಚ್.ಆರ್. ದಿನೇಶ್, ಆರ್.ರಾಮಸ್ವಾಮಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-51-1325192281

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.