ಮೈಸೂರು: ‘ಪ್ರಜಾಪ್ರಭುತ್ವದ ಕಲ್ಪನೆಯುಳ್ಳ ದೇಶದಲ್ಲಿ ಆಡಳಿತಾರೂಢರು ಯಾರು ಭಾರತೀಯ ಆಗಬೇಕು ಎಂಬುದನ್ನು ತೀರ್ಮಾನಿಸುವ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿರುವುದು ವಿಷಾದನೀಯ. ಇದರ ಸೂಕ್ಷ್ಮತೆಯನ್ನು ತಿಳಿಸುವ ಶೈಕ್ಷಣಿಕ ಶಿಸ್ತು ರಾಜ್ಯಶಾಸ್ತ್ರದಲ್ಲಿ ಬರಬೇಕು’ ಎಂದು ಸಾಮಾಜಿಕ ಹೋರಾಟಗಾರ ಶಿವಸುಂದರ್ ತಿಳಿಸಿದರು.

ಇಲ್ಲಿನ ಕೆಎಸ್ಒಯು ಕಾವೇರಿ ಸಭಾಂಗಣದಲ್ಲಿ ನಡೆದ ರಾಜ್ಯ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘದ 21ನೇ ಮಹಾಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿ, ‘ದೇಶದಲ್ಲಿ ಹುಟ್ಟಿದ ಪ್ರತಿ ಮಗುವಿಗೂ ನಾಗರಿಕತೆಯ ಹಕ್ಕು ಇದೆ. ಆದರೆ ಕೇಂದ್ರ ಸರ್ಕಾರ ಅವರಿಗೆ ಬೇಕಾದ 11 ದಾಖಲೆಗಳಲ್ಲಿ ಯಾವುದಾದರು ಒಂದು ದಾಖಲೆ ಇಲ್ಲದಿದ್ದರೆ ನಮ್ಮನ್ನು ನಾಗರಿಕರಲ್ಲ ಎನ್ನಲು ಹೊರಟಿದೆ’ ಎಂದು ದೂರಿದರು.

‘ನಾಗರಿಕ ಸ್ಥಾನ ಇಲ್ಲದಿದ್ದರೆ ಸಂವಿಧಾನದಡಿ ದೊರೆಯುವ ಹಕ್ಕುಗಳಿಂದ ವಂಚಿತರಾಗಲಿದ್ದಾರೆ. ಈ ಪ್ರಕ್ರಿಯೆ ನಡೆದ ರಾಜ್ಯಗಳಲ್ಲಿ 6.5 ಕೋಟಿ ಜನರು ನಾಗರಿಕರಲ್ಲ ಎಂದು ಗುರುತಿಸಲಾಗಿದೆ. ಬಂಧುತ್ವದ ಮೇಲೆ ದಾಳಿ ನಡೆಯುತ್ತಿರುವುದು ವಿಪರ್ಯಾಸ’ ಎಂದು ಆರೋಪಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕ ಪ್ರೊ.ಎಸ್.ನರೇಂದ್ರ ಕುಮಾರ್, ರಾಜ್ಯ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಪ್ರೊ.ಆರ್.ಎಲ್.ಎಂ.ಪಾಟೀಲ್, ಸಂಸ್ಥಾಪಕ ಕಾರ್ಯದರ್ಶಿ ಪ್ರೊ.ಜಯಪ್ರಕಾಶ್ ಮಾವಿನಕುಳಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-39-1973862982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.