ಮೈಸೂರು: ‘ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳನ್ನು ಗುರಿಯಾಗಿಸಿಕೊಂಡಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಎಸ್ಐಆರ್ (ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ಮೂಲಕ ಕಟ್ಟಿ ಹಾಕುವ ಕೆಲಸ ಮಾಡುತ್ತಿದ್ದಾರೆ’ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ದೂರಿದರು.

ಇಲ್ಲಿನ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಭಾನುವಾರ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ನೀತಿ ಸಂಶೋಧನೆ ಮತ್ತು ತರಬೇತಿ ವಿಭಾಗದಿಂದ ಭಾನುವಾರ ನಡೆದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬ್ಲಾಕ್, ಬೂತ್ ಮಟ್ಟದ ಸಮಿತಿಯ ಪದಾಧಿಕಾರಿಗಳು ಹಾಗೂ ಬಿಎಲ್ಎ- 2ಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಬಿಜೆಪಿಯವರು ಹನ್ನಾರ ಮಾಡುತ್ತಿದ್ದಾರೆ. ಅವರ ಸಂಚಿನ ವಿರುದ್ಧ ಜಾಗೃತರಾಗಬೇಕು. ಇದಕ್ಕೆ ಉದಾಹರಣೆಯಾಗಿ ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ’ ಎಂದು ಹೇಳಿದರು.

‘ಮತದಾನ ದೇಶವನ್ನು ಉಳಿಸುವ ಸಂವಿಧಾನ ಬದ್ಧ ಹಕ್ಕಾಗಿದೆ. ಪ್ರತಿಯೊಬ್ಬ ವ್ಯಕ್ತಿಯ ಮತದಾನದ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಒಂದು ವೇಳೆ ನಿಜವಾದ ಮತದಾರರ ಮತದಾನದ ಹಕ್ಕನ್ನು ಕಸಿದರೆ ಅದು ದೇಶದ್ರೋಹದ ಕೆಲಸವಾಗುತ್ತದೆ. ಬಿಜೆಪಿ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿರುವ ಕೇಂದ್ರ ಚುನಾವಣೆ ಆಯೋಗದ ಕುತಂತ್ರಕ್ಕೆ ಒಳಗಾಗದಂತೆ ಕಾಂಗ್ರೆಸ್ ಬಿಎಲ್ಎ 2ಗಳು ಮತ ರಕ್ಷಕರಂತೆ ಕೆಲಸ ಮಾಡಬೇಕಾಗಿದೆ’ ಎಂದು ಸಲಹೆ ನೀಡಿದರು.

‘ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ 48ಸಾವಿರ ಜನರ ಹೆಸರುಗಳು ಮ್ಯಾಪಿಂಗ್ ಆಗಿಲ್ಲ. ಹೀಗಾಗಿ ಮ್ಯಾಪಿಂಗ್ ಮಾಡಲು ಬರುವಂತಹ ಅಧಿಕಾರಿಗಳ ಜೊತೆ, ಪಕ್ಷದ ಬಿಎಲ್ಎ 2ಗಳು ಪ್ರತಿ ಮನೆ ಮನೆಗೆ ಭೇಟಿ ನೀಡಿ, ಕಾರಣವಿಲ್ಲದೆ ಮತ ಡಿಲೀಟ್ ಮಾಡಲು ಅವಕಾಶ ನೀಡದಂತೆ ಎಚ್ಚರಿಕೆ ವಹಿಸಬೇಕಾಗಿದೆ’ ಎಂದು ತಿಳಿಸಿದರು.

ಕೆಪಿಸಿಸಿ ಸದಸ್ಯ ಎಚ್.ವಿ. ರಾಜೀವ್ ಮಾತನಾಡಿ, ‘ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾರ್ಯೋನ್ಮುಖವಾಗುವುದು ಸರಿಯಲ್ಲ. ಈಗಿನಿಂದಲೇ ಸಭೆ ನಡೆಸಿ, ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ನೇಮಿಸಿ ಚುನಾವಣೆಗೆ ಸಿದ್ಧತೆಯ ಹೋರಾಟ ನಡೆಸಬೇಕಿದೆ’ ಎಂದರು.

ಸಂವಿಧಾನ ಪೀಠಿಕೆ ಬೋಧಿಸಿದ ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಮಾತನಾಡಿ, ‘2028ರ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ತರುವ ನಿಟ್ಟಿನಲ್ಲಿ ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ಇದಕ್ಕಾಗಿ ಪ್ರತಿಯೊಬ್ಬರೂ ಬದ್ಧತೆ ತೋರಬೇಕಿದ್ದು, ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.

ಕಾಂಗ್ರೆಸ್ ನಗರ ಜಿಲ್ಲಾ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿದರು. ಕೆಪಿಸಿಸಿ ಸಂಶೋಧನಾ ಮತ್ತು ತರಬೇತಿ ವಿಭಾಗ ಅಧ್ಯಕ್ಷ ರಘು ದೊಡ್ಡೇರಿ, ಮಹಿಳಾ ನಗರ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಚಿಕ್ಕಣ್ಣ, ಮುಖಂಡರಾದ ಶಿವಣ್ಣ, ನಾರಾಯಣ, ಚಿಕ್ಕಣ್ಣ, ಈರಪ್ಪ, ವೀಣಾ, ವಾಸುದೇವಮೂರ್ತಿ, ಮುನಿ, ಜಾಕೀರ್ ಪಾಷಾ, ವಿಶ್ವನಾಥ್, ನಾಗರಾಜ್, ಸುನೀಲ್, ಮಲ್ಲೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-39-1570716284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.