ಮೈಸೂರು: ‘ಬಸವಣ್ಣನ ತತ್ವಗಳನ್ನು ಪಾಲಿಸುವ ಮೂಲಕ ಶುದ್ಧವಾದ ಕೆಲಸ ಮಾಡಿದರೆ ಇಡೀ ಊರು, ಇಡೀ ವಿಶ್ವವೇ ಶುದ್ಧವಾಗುತ್ತದೆ’ ಎಂದು ಶಾಸಕ ತನ್ವೀರ್ ಸೇಠ್ ಅಭಿಪ್ರಾಯಪಟ್ಟರು.

ನಗರದ ಶಿಕ್ಷಕರ ಬಡಾವಣೆ, ಶಕ್ತಿನಗರ ಹಾಗೂ ವಿದ್ಯಾಶಂಕರ ಬಡಾವಣೆಯ ಬಸವ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ಸಮಿತಿಯ ಮೊದಲ ವಾರ್ಷಿಕೋತ್ಸವ, ಬಸವ ಜಯಂತಿ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘12ನೇ ಶತಮಾನದಲ್ಲಿ ಇದ್ದಂತಹ ವ್ಯವಸ್ಥೆಯನ್ನು ಸುಧಾರಣೆ ಮಾಡಲು ಬಸವಣ್ಣನವರು ಚಾಲನೆ ನೀಡಿದರು. 900 ವರ್ಷಗಳಾದರೂ ಅಂದಿನ ಸಮಸ್ಯೆಗಳು ಇಂದಿಗೂ ಕಾಣುತ್ತಿವೆ. ಅಂದರೆ ಬಸವಣ್ಣನವರ ವಚನಗಳನ್ನು ನಾವು ಪರಿಪೂರ್ಣವಾಗಿ ಅರ್ಥ ಮಾಡಿಕೊಂಡಿಲ್ಲ ಎನ್ನುವ ಭಾವನೆ ಮೂಡುತ್ತದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ‘ಇಡೀ ವಿಶ್ವವನ್ನು ಸ್ವಚ್ಛಗೊಳಿಸುವ ಬಸವ ತತ್ವವನ್ನು ಪಾಲನೆ ಮಾಡುವ ವ್ಯವಸ್ಥೆ ನಿರ್ಮಾಣವಾಗಬೇಕು’ ಎಂದು ಅಭಿಪ್ರಾಯಪಟ್ಟರು.

‘ಮಕ್ಕಳ ಮೇಲೆ ಒತ್ತಡ ಹಾಕಿ ಓದಿ ಎಂದು ಹೇಳುವುದಷ್ಟೇ ಪೋಷಕರ ಜವಾಬ್ದಾರಿ ಅಲ್ಲ. ಅವರ ಬೆಳವಣಿಗೆಗೆ ಪೂರಕವಾದ ವಾತಾವರಣ ಸೃಷ್ಟಿ ಮಾಡುವುದರ ಜೊತೆಗೆ ಮಾರ್ಗದರ್ಶನವನ್ನು ಅಗತ್ಯವಾಗಿ ನೀಡಬೇಕು. ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಎಸ್ಎಸ್ಎಲ್ಸಿ, ಪಿಯುಸಿ ನಂತರ ಏನು ಮಾಡಬೇಕು ಎನ್ನುವ ಬಗ್ಗೆ ಮಾರ್ಗದರ್ಶನ ನೀಡುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ರಾಘವೇಂದ್ರ ನಗರದ ಬಸವೇಶ್ವರ ಮಠದ ಶಿವಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಸವ ಸಮಿತಿಯ ಅಧ್ಯಕ್ಷ ಎಚ್.ಆರ್.ವೃಷಬೇಂದ್ರ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಪಿ.ಶಿವರಾಜು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಡಿ.ಎಸ್.ಸದಾಶಿವಮೂರ್ತಿ ಪ್ರದಾನ ಭಾಷಣ ಮಾಡಿದರು.

ವಿಟಿಯು ಕಾರ್ಯಕ್ರಮ ಸಂಯೋಜಕಿ ಹೇಮಾ ಪಾಟೀಲ್, ಸರ್ಕಲ್ ಇನ್ಸ್ಪೆಕ್ಟರ್ ಎಸ್.ನಾಗೇಶ್ ಅವರನ್ನು ಗೌರವಿಸಲಾಯಿತು. ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಹಿನಕಲ್ ಬಸವರಾಜು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-39-150546745

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.