ಮೈಸೂರು: ಗಾಳಿ–ಮಳೆ ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕೋರಿದೆ.

ನಿಗಮದ ವ್ಯಾಪ್ತಿಯ 5 ಜಿಲ್ಲೆಗಳಲ್ಲಿ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದೆ. ಅತಿಯಾದ ಗಾಳಿ–ಮಳೆಯಿಂದ ವಿದ್ಯುತ್ ಅನಾಹುತಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಆ ಸಂದರ್ಭದಲ್ಲಿ ಸಂಭವಿಸಬಹುದಾದ ವಿದ್ಯುತ್ ಅವಘಡಗಳು, ಅಡಚಣೆಗಳು ಹಾಗೂ ಇತರ ತೊಂದರೆಗಳನ್ನು ಎದುರಿಸಲು ‘ಸೆಸ್ಕ್’ ಸನ್ನದ್ಧವಾಗಿದೆ. ಗ್ರಾಹಕರೂ ಇದಕ್ಕೆ ತಕ್ಕಂತೆ ಸಹಕರಿಸಬೇಕು ಎಂದು ತಿಳಿಸಿದೆ.

ಗ್ರಾಹಕರ ಸುರಕ್ಷತೆ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಲಾಗಿದೆ. ಸ್ಥಳೀಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಹಕರಿಗೆ ಅಗತ್ಯ ಸೇವೆ ನೀಡಲು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಸೆಸ್ಕ್ ತಿಳಿಸಿದೆ.

ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿರುವುದು, ಕಂಬಗಳಿಗೆ ಹಾನಿಯಾಗಿರುವುದು, ಟ್ರಾನ್ಸ್ಫಾರ್ಮರ್ಗಳಲ್ಲಿ ಸಮಸ್ಯೆಗಳು ಕಂಡುಬಂದಲ್ಲಿ ಸಾರ್ವಜನಿಕರು ಸಹಾಯವಾಣಿ 1912 ಅಥವಾ ನಿಗಮದ ವಾಟ್ಸ್ಆ್ಯಪ್ ಸಂಖ್ಯೆಗೆ 94489 91912 ಫೋಟೊ ಸಹಿತ ಮಾಹಿತಿ ನೀಡಬೇಕು. ಕೊಡಗು – 18005990061, ಮೈಸೂರು – 18005990062, ಚಾಮರಾಜನಗರ – 18005990063, ಹಾಸನ – 18005990065, ಮಂಡ್ಯ – 18005990066 ಸಂಪರ್ಕಿಸಬಹುದು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-38-1610184309

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.