ಮೈಸೂರು: ಈ ಬಾರಿಯ ಪೂರ್ವ ಮುಂಗಾರು ರೈತರ ಪಾಲಿಗೆ ನಿರಾಸದಾಯಕವಾಗಿದ್ದು, ವಾಡಿಕೆಗಿಂತ ಶೇ 42ರಷ್ಟು ಮಳೆ ಕೊರತೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೂ ತೀವ್ರ ಹಿನ್ನಡೆಯಾಗಿದೆ.

ಮಾರ್ಚ್ನಲ್ಲಿ ಆರಂಭಗೊಂಡು ಮೇ ಅಂತ್ಯದವರೆಗಿನ ಅವಧಿಯನ್ನು ‘ಪೂರ್ವ ಮುಂಗಾರು’ ಎಂದು ಪರಿಗಣಿಸಲಾಗುತ್ತದೆ. ಈ ಅವಧಿಯಲ್ಲಿ ಈ ವರ್ಷ ದಕ್ಷಿಣ ಒಳನಾಡಿನ 11 ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ ಮಾತ್ರ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದು ಆತಂಕದ ಸಂಗತಿ. ಈ ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 198 ಮಿಲಿಮೀಟರ್ನಷ್ಟು ಮಳೆ ಸುರಿಯಬೇಕಿತ್ತು. ಆದರೆ 115 ಮಿ.ಮೀ. ನಷ್ಟು ಮಾತ್ರ ಮಳೆಯಾಗಿದೆ.

ಜಿಲ್ಲೆಯ ಎಲ್ಲ ತಾಲ್ಲೂಕುಗಳೂ ಈ ಬೇಸಿಗೆಯಲ್ಲಿ ಮಳೆಯ ತೀವ್ರ ಕೊರತೆ ಎದುರಿಸಿವೆ. ಅದರಲ್ಲಿಯೂ ಹುಣಸೂರು, ಕೆ.ಆರ್. ನಗರ, ಎಚ್.ಡಿ. ಕೋಟೆ, ಸಾಲಿಗ್ರಾಮ ತಾಲ್ಲೂಕುಗಳಲ್ಲಿ ವಾಡಿಕೆಯ ಅರ್ಧದಷ್ಟೂ ಮಳೆಯಾಗಿಲ್ಲ. ಪರಿಣಾಮವಾಗಿ ಕೃಷಿ ಚಟುವಟಿಕೆಗೆ ತೀವ್ರ ಹಿನ್ನಡೆ ಆಗಿದೆ.

ಏಪ್ರಿಲ್ನಲ್ಲಿ ಜಿಲ್ಲೆಯಲ್ಲಿ ಸರಾಸರಿ 66 ಮಿಲಿ ಮೀಟರ್ಗೆ ಪ್ರತಿಯಾಗಿ ಕೇವಲ 9.7 ಮಿ.ಮೀ. ಮಳೆಯಾಗಿದ್ದು, ಶೇ 85ರಷ್ಟು ಕೊರತೆ ಆಗಿತ್ತು. ಇದರಿಂದಾಗಿ ಅಂತರ್ಜಲ ಬತ್ತಿದ್ದು, ಮುಂಗಾರು ಪೂರ್ವ ಬಿತ್ತನೆ ಬಹುತೇಕ ಸ್ಥಗಿತಗೊಂಡಿತ್ತು. ಮೇ ತಿಂಗಳಲ್ಲಿ 117 ಮಿ.ಮೀ. ಮಳೆಗೆ ಪ್ರತಿಯಾಗಿ 90 ಮಿ.ಮೀ.ನಷ್ಟು ಮಳೆ ಸುರಿದಿದ್ದು, ಶೇ 23ರಷ್ಟು ಕೊರತೆ ಆಗಿದೆ.

ಮಳೆಯ ಕೊರತೆಯಿಂದಾಗಿ ಕೃಷಿ ಚಟುವಟಿಕೆಗೆ ಹಿನ್ನಡೆ ಆಗುವ ಜೊತೆಗೆ ಕೆರೆ–ಕಟ್ಟೆಗಳೂ ಒಣಗಿವೆ. ಹೀಗಾಗಿ ಗ್ರಾಮೀಣ ಭಾಗಗಳಲ್ಲಿ ಜನ–ಜಾನುವಾರುಗಳಿಗೆ ನೀರಿನ ಕೊರತೆ ಹೆಚ್ಚಿದೆ. ಬಹುತೇಕ ಕಡೆಗಳಲ್ಲಿ ದೊಡ್ಡ ಕೆರೆಗಳ ಒಡಲು ಒಣಗಿ ನಿಂತಿದ್ದು, ಖಾಲಿ ಅಂಗಳಗಳ ದೃಶ್ಯ ಸಾಮಾನ್ಯವಾಗಿದೆ.

ಜಿಲ್ಲೆಯಲ್ಲಿನ ಸರಾಸರಿ ಅಂತರ್ಜಲ ಮಟ್ಟವೂ ಈ ಬಾರಿಯ ಬೇಸಿಗೆಯಲ್ಲಿ ಹಲವು ಮೀಟರ್ಗಳಷ್ಟು ಆಳಕ್ಕೆ ಕುಸಿದಿದೆ. ಇದರಿಂದಾಗಿ ಕೊಳವೆಬಾವಿಗಳು ಬತ್ತಿದ್ದು, ಇವುಗಳನ್ನೇ ನಂಬಿ ಕೃಷಿ ಚಟುವಟಿಕೆ ನಡೆಸುತ್ತಿರುವ ಅನ್ನದಾತರೂ ಆತಂಕಕ್ಕೆ ಒಳಗಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-39-2106970675

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.