ಮೈಸೂರು: ನಗರದ ಬಸವನಗುಡಿ ಉದ್ಯಾನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಅನುಮತಿ ನೀಡದ ಮಹಾನಗರ ಪಾಲಿಕೆ ತಾರತಮ್ಯ ಧೋರಣೆ ಖಂಡಿಸಿ ಕರ್ನಾಟಕ ರಾಜ್ಯ ಭೀಮ್ ಸೇನೆ ಸದಸ್ಯರು ಪಾಲಿಕೆ ಮುಂಭಾಗ ಅನಿರ್ದಿಷ್ಠಾವಧಿ ಪ್ರತಿಭಟನೆ ನಡೆಸಿದರು.

ಸಂಘಟನೆ ಮುಖಂಡ ಎಚ್.ಧರ್ಮರಾಜ, ‘ಇದೇ ಉದ್ಯಾನದಲ್ಲಿ ಕುವೆಂಪು ಹಾಗೂ ಬಾಲಗಂಗಾಧರನಾಥ ಸ್ವಾಮೀಜಿ ಪುತ್ಥಳಿ ಸ್ಥಾಪನೆಗೆ ಅನುಮತಿ ನೀಡಿರುವ ಪಾಲಿಕೆ ಅಂಬೇಡ್ಕರ್ ಪುತ್ಥಳಿ ಸ್ಥಾಪನೆ ಕುರಿತು ತಾರತಮ್ಯ ನೀತಿ ಅನುಸರಿಸುತ್ತಿದೆ’ ಎಂದು ದೂರಿದರು.

‘ತಾರತಮ್ಯ ನೀತಿ ಅನುಸರಿಸದೆ ಸ್ಥಾಪನೆಗೆ ಕೂಡಲೇ ಅನುಮತಿ ನೀಡಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ಎಸ್.ಸರ್ವೇಶ್, ಕಿರಣ್, ಸಿದ್ದರಾಜು, ಮಲ್ಲೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-39-1856893166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.