ಮೈಸೂರಿನ ಪುರಭವನ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಮುಂಭಾಗ ಭಾರತೀಯ ಬೌದ್ಧ ಮಹಾಸಭಾ ಸದಸ್ಯರು 1947ರ ಬಿ.ಟಿ ಕಾಯ್ದೆ ರದ್ದಾಗಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು
ಸಂಯುಕ್ತ ಕಿಸಾನ್ ಮೋರ್ಚಾವು ಕ್ವಿಟ್ ಇಂಡಿಯಾ ಚಳವಳಿಯ ನೆನಪಿನಲ್ಲಿ ಕರೆ ನೀಡಿರುವ ಪ್ರತಿಭಟನೆ ಬೆಂಬಲಿಸಿ ಗಾಂಧಿ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ಸದಸ್ಯರು ಪ್ರತಿಭಟಿಸಿದರು
ಮೈಸೂರಿನ ಜಿಲ್ಲಾಧಿಕಾರಿ ಹಳೇ ಕಚೇರಿ ಮುಂಭಾಗ ಕರ್ನಾಟಕ ಸೇನಾ ಪಡೆ ಸದಸ್ಯರು ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುತ್ತಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬುಧವಾರ ಪ್ರತಿಭಟಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಗೋಲ್ಡನ್ ಸುರೇಶ್ ಪ್ರಭುಶಂಕರ್ ಸಿಂದುವಳ್ಳಿ ಶಿವಕುಮಾರ್ ಬೋಗಾದಿ ಸಿದ್ದೇಗೌಡ ಮಧುವನ ಚಂದ್ರು ವರಕೂಡು ಕೃಷ್ಣೇಗೌಡ ಶಿವಲಿಂಗಯ್ಯ ನೇಹಾ ಭಾಗವಹಿಸಿದ್ದರು
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯೆಯರು ಗಾಂಧಿ ವೃತ್ತದ ಬಳಿ ನಡೆಸುತ್ತಿರುವ ಅಹೋರಾತ್ರಿ ಧರಣಿಯು ಬುಧವಾರವೂ ಮುಂದುವರಿಯಿತು