ಮೈಸೂರು: ‘ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದ ದಿ.ಎನ್. ರಾಚಯ್ಯ ಅವರ ಸಾಮಾಜಿಕ ಬದ್ಧತೆ, ಸಾಧನೆ ಹಾಗೂ ಕೊಡುಗೆಗಳನ್ನು ಈಗಿನ ಯುವಪೀಳಿಗೆಗೆ ತಿಳಿಸುವ ಅಗತ್ಯವಿದೆ’ ಎಂದು ಚಿಂತಕ ಪ್ರೊ.ಕಾಳೇಗೌಡ ನಾಗವಾರ ಹೇಳಿದರು.

ಇಲ್ಲಿನ ಮಾನಸಗಂಗೋತ್ರಿಯ ಬಿಂಎಂಶ್ರೀ ಸಭಾಂಗಣದಲ್ಲಿ ಬುಧವಾರ ಮೈಸೂರು ವಿಶ್ವವಿದ್ಯಾಲಯದ ಎನ್. ರಾಚಯ್ಯ ಅಧ್ಯಯನ ಪೀಠ ಹಾಗೂ ರಾಜ್ಯಶಾಸ್ತ್ರ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ಎನ್. ರಾಚಯ್ಯ ಅವರ 107ನೇ ಜನ್ಮದಿನೋತ್ಸವದ ಅಂಗವಾಗಿ ಬುಧವಾರ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದ ಅವರು, ಸಾಮಾಜಿಕ ನ್ಯಾಯ, ಭೂ ಸುಧಾರಣೆ ಕಾರ್ಯಕ್ರಮಗಳಿಗೆ ಉತ್ತೇಜನ ಕೊಟ್ಟಿದ್ದರು. ಬುದ್ಧನಿಂದ ಪ್ರಭಾವಿತರಾಗಿದ್ದ ಮಾನವೀಯ ಕಾಳಜಿಯ ನಾಯಕರಾಗಿದ್ದರು’ ಎಂದು ಸ್ಮರಿಸಿದರು.

ಎನ್. ರಾಚಯ್ಯ ಅವರ ಜನ್ಮದಿನೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-37-1794634387

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.