ಮೈಸೂರು: ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ರೈತರಿಂದ ರಾಗಿ ಖರೀದಿ ಸಂಬಂಧ ಕೇಂದ್ರಗಳನ್ನು ತೆರೆಯಲಾಗಿದ್ದು, ಮೇ 15ರೊಳಗೆ ಮಾರುವಂತೆ ಜಿಲ್ಲಾಡಳಿತವು ರೈತರನ್ನು ಕೋರಿದೆ.

ಮೇ ಮತ್ತು ಜೂನ್ ಒಳಗೆ ಎನ್.ಎಫ್.ಎಸ್.ಎ. ಅಡಿ ರಾಗಿ ವಿತರಣೆಗೆ ಕ್ರಮ ವಹಿಸಬೇಕಾಗಿದ್ದರಿಂದ ಬೇಗ ಪ್ರಕ್ರಿಯೆ ಮುಕ್ತಾಯಗೊಳಿಸುವಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರು ಸೂಚಿಸಿದ್ದಾರೆ.

ಅದರಂತೆ, ಜಿಲ್ಲೆಯಲ್ಲಿ ಖರೀದಿ ಪ್ರಕ್ರಿಯೆಯನ್ನು ಮೇ 15ರಂದು ಮುಕ್ತಾಯಗೊಳಿಸಲಾಗುವುದು.

ಬೆಂಬಲ ಬೆಲೆ ಯೋಜನೆಯಡಿ ರಾಗಿಯನ್ನು ಸರ್ಕಾರಕ್ಕೆ ಕೊಡಲು ನೋಂದಣಿ ಮಾಡಿಸಿದವರು ತ್ವರಿತವಾಗಿ ಮಾರಾಟ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-38-568846202

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.