ಮೈಸೂರು: ‘ಮುಂಗಾರು ಮಳೆಗಾಲದಲ್ಲಿ ಉಂಟಾಗಬಹುದಾದ ವಿದ್ಯುತ್ ವ್ಯತ್ಯಯ ಹಾಗೂ ತುರ್ತು ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ‘ಸೆಸ್ಕ್’ ಸಂಪೂರ್ಣ ಸನ್ನದ್ಧವಾಗಿರಬೇಕು’ ಎಂದು ಪ್ರಭಾರ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ ಸೂಚಿಸಿದರು.

ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಸೆಸ್ಕ್ ಸನ್ನದ್ಧವಾಗಿದೆ ಎಂಬ ವಿಶ್ವಾಸ ಜನರಲ್ಲಿ ಮೂಡಬೇಕು. ಸಾರ್ವಜನಿಕರು ಸಂಪರ್ಕಿಸಲು ಸಾಧ್ಯವಾಗದಿದ್ದರೆ ಸಮಸ್ಯೆ ಪರಿಹರಿಸಲು ಆಗುವುದಿಲ್ಲ. ಆದ್ದರಿಂದ ದೂರು ಸ್ವೀಕಾರ ಮತ್ತು ಸ್ಪಂದನಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಗ್ರಾಹಕರಿಗೆ ತ್ವರಿತವಾಗಿ ಸ್ಪಂದಿಸುವುದು ಅತ್ಯಂತ ಮುಖ್ಯವಾಗಿದೆ. ಹೀಗಾಗಿ, ಟೋಲ್ಫ್ರೀ ಹಾಗೂ ಸಾರ್ವಜನಿಕ ಸಂಪರ್ಕ ಸಂಖ್ಯೆಗಳು ನಿರಂತರವಾಗಿ ಕಾರ್ಯನಿರ್ವಹಿಸಬೇಕು. ನಿಷ್ಕ್ರಿಯವಾಗಿರುವ ಸಂಪರ್ಕ ಸಂಖ್ಯೆಗಳನ್ನು ತಕ್ಷಣವೇ ಸಕ್ರಿಯಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.

ಮುಂಚಿತವಾಗಿಯೇ: ಐದು ಜಿಲ್ಲೆಗಳ ವ್ಯಾಪ್ತಿಯ ವಿಭಾಗಗಳ ಕಾರ್ಯಪಾಲಕ ಎಂಜಿನಿಯರ್ಗಳೊಂದಿಗೆ ಚರ್ಚೆ ನಡೆಸಿದ ಅವರು, ಎದುರಾಗಬಹುದಾದ ಸಮಸ್ಯೆಗಳು ಹಾಗೂ ಅವುಗಳನ್ನು ಎದುರಿಸಲು ಅಗತ್ಯವಿರುವ ಪರಿಕರಗಳ ಲಭ್ಯತೆಯ ಮಾಹಿತಿ ಪಡೆದರು.

‘ಮೊದಲ ಮಳೆಯಲ್ಲೇ ಸಾಕಷ್ಟು ತೊಂದರೆಗಳು ಎದುರಾಗಿರುವುದರಿಂದ ಅಗತ್ಯ ಸಾಮಗ್ರಿಗಳನ್ನು ಮುಂಚಿತವಾಗಿಯೇ ಸಂಗ್ರಹಿಸಿಟ್ಟುಕೊಳ್ಳಬೇಕು’ ಎಂದು ಸೂಚಿಸಿದರು.

‘ಸಮಸ್ಯೆ ಉಂಟಾದ ಬಳಿಕ ಪರಿಕರ ಕೇಳುವ ಬದಲು ಪೂರ್ವಯೋಜಿತವಾಗಿ ದಾಸ್ತಾನು ಇಟ್ಟುಕೊಳ್ಳಬೇಕು. ಪದೇ ಪದೇ ಬೇಡಿಕೆ ಇಡುವುದಕ್ಕಿಂತ ಅಗತ್ಯವಿರುವಷ್ಟು ಸಾಮಗ್ರಿಗಳನ್ನು ಈಗಲೇ ಹೊಂದುವುದು ಉತ್ತಮ. ಎಲ್ಲಾ ಇಇಗಳು ಆಯಾ ವಿಭಾಗಗಳಲ್ಲಿರುವ ಸ್ಟಾಕ್ ಮಾಹಿತಿಯನ್ನು ನಿರಂತರವಾಗಿ ಅಪ್ಡೇಟ್ ಮಾಡಬೇಕು’ ಎಂದು ತಿಳಿಸಿದರು.

ಈಗಲೇ ಪೂರೈಸಿ: ‘ಸಕಾಲಕ್ಕೆ ಪರಿಕರ ಪೂರೈಕೆ ಆಗದಿದ್ದರೆ ಕೆಲಸ ನಿರ್ವಹಿಸುವುದು ಕಷ್ಟ. ಎಲ್ಲಾ ವಿಭಾಗಗಳಿಗೂ ಶೀಘ್ರವಾಗಿ ಸಾಮಗ್ರಿಗಳು ತಲುಪಬೇಕು. ಮುಂಗಾರು ಅವಧಿಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ ಕನಿಷ್ಠ ಎರಡು ತಿಂಗಳಿಗೆ ಅಗತ್ಯವಾಗುವಷ್ಟು ಕಂಬಗಳು ಹಾಗೂ ಇತರ ಪರಿಕರಗಳನ್ನು ಈಗಲೇ ಪೂರೈಸಬೇಕು’ ಎಂದು ಸೂಚಿಸಿದರು.

‘ಎಸ್ಒಪಿ ಪ್ರಕಾರ ನಿರ್ವಹಿಸದ ಗುತ್ತಿಗೆದಾರರಿಗೆ ನೋಟಿಸ್ ಜಾರಿಗೊಳಿಸಬೇಕು. ಮಳೆಗಾಲದಲ್ಲಿ ಸಮಯಕ್ಕೆ ಸರಿಯಾಗಿ ಹಾಗೂ ಗುಣಮಟ್ಟದ ಕೆಲಸ ಮಾಡುವ ಗುತ್ತಿಗೆದಾರರಿಗೆ ಹೆಚ್ಚಿನ ಕೆಲಸ ನೀಡಬೇಕು. ನಿರ್ಲಕ್ಷ್ಯ ತೋರಿಸುವವರಿಗೆ ಕಡಿಮೆ ಕೆಲಸ ಕೊಡಬೇಕು’ ಎಂದು ತಿಳಿಸಿದರು.

ತಾಂತ್ರಿಕ ನಿರ್ದೇಶಕಿ ಶರಣಮ್ಮ ಎಸ್. ಜಂಗಿನ, ಮುಖ್ಯ ಪ್ರಧಾನ ವ್ಯವಸ್ಥಾಪಕಿ (ಆಂತರಿಕ ಲೆಕ್ಕಪರಿಶೋಧನೆ) ಲಿಂಗರಾಜಮ್ಮ, ಮುಖ್ಯ ಎಂಜಿನಿಯರ್ ಎಲ್. ಲೋಕೇಶ್, ಎಸ್ಇಗಳಾದ ಸುನೀಲ್ ಕುಮಾರ್, ಸೋಮಶೇಖರ್, ಪ್ರಧಾನ ವ್ಯವಸ್ಥಾಪಕಿ ಬಿ.ಆರ್. ರೂಪಾ, ಆರ್. ರಾಮಸ್ವಾಮಿ, ಎಚ್.ಆರ್. ದಿನೇಶ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-39-1178820700

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.