ಮೈಸೂರು: ವರುಣ ಕ್ಷೇತ್ರದ ರಾಂಪುರ ಎಡದಂಡೆ ನಾಲೆ ಕೊನೆಭಾಗಕ್ಕೂ ಸುಗಮವಾಗಿ ನೀರು ಹರಿಯುವಂತೆ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ.

ಇಲ್ಲಿನ ಸಿದ್ದರಾಮನಹುಂಡಿ, ನಂದಿಗುಂದ, ಯಡಕೊಳ, ಅಂಚೆಹುಂಡಿ, ಕುಪ್ಪೇಗಾಲ ವ್ಯಾಪ್ತಿಯಲ್ಲಿ ಭತ್ತದ ಕೃಷಿ ಮಾಡುತ್ತಿದ್ದ ರೈತರು, ನಾಲೆ ನೀರು ಸರಿಯಾಗಿ ತಲುಪುತ್ತಿಲ್ಲ ಹಾಗೂ ಅಧಿಕಾರಿಗಳು ಕ್ರಮವಹಿಸುತ್ತಿಲ್ಲ ಎಂದು ಆರೋಪಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದರು.

ಈ ಬಗ್ಗೆ ‘ಪ್ರಜಾವಾಣಿ’ಯು ಮೇ 15ರಂದು ವರದಿ ಮಾಡಿ ಗಮನ ಸೆಳೆದಿತ್ತು.

‘ಪತ್ರಿಕೆಯ ವರದಿ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಎಂಜಿನಿಯರ್ ರಾಧಾ ಹಾಲಪ್ಪ ಅವರು ನಾಲೆ ಕೊನೆವರೆಗೂ ನೀರನ್ನು ತಲುಪಿಸುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ನಮ್ಮ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ’ ಎಂದು ರೈತರು ಸ್ಮರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-38-110545683

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.