ಮೈಸೂರು: ‘ಜಿಲ್ಲಾ ಆರ್ಡಿಪಿಆರ್ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ’ವನ್ನು ಫೆ. 12 ಮತ್ತು 13ರಂದು ಬೆಳಿಗ್ಗೆ 9ಕ್ಕೆ ನಜರ್ಬಾದ್ನ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಯುಕೇಶ್ಕುಮಾರ್ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ಕ್ರೀಡಾಕೂಟದ ಲಾಂಛನ ಹಾಗೂ ಪ್ರಚಾರಸಾಮಗ್ರಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳ ಸಹಯೋಗದಲ್ಲಿ ಆಯೋಜಿಸಲಾಗಿದೆ’ ಎಂದರು.

‘100 ಮೀಟರ್ ಮತ್ತು 400 ಮೀ. ಓಟದ ಸ್ಪರ್ಧೆ, ವಾಲಿಬಾಲ್, ಥ್ರೋಬಾಲ್, ಹಗ್ಗಜಗ್ಗಾಟ, ಪೆನಾಲ್ಟಿ ಶೂಟೌಟ್ (ಹಾಕಿ), ಮ್ಯೂಸಿಕಲ್ಚೇರ್, ಬಾಲ್ ಇನ್ದಿ ಬ್ಯಾಸ್ಕೆಟ್, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಾನಪದಗೀತೆ, ಜನಪದ ನೃತ್ಯ, ವಾದ್ಯ ಸಂಗೀತ, ಭಾವಗೀತೆ ಸ್ಪರ್ಧೆ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಸವಿತಾ ಬಿ.ಎಂ. (ಆಡಳಿತ), ಭೀಮಪ್ಪ ಕೆ. ಲಾಳಿ (ಅಭಿವೃದ್ಧಿ), ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ ಕೆ., ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ಇಇ ವೀರೇಶ್, ಸಹಾಯಕ ನಿರ್ದೇಶಕ ವಿಶ್ವನಾಥ್, ಮೈಸೂರು ತಾ.ಪಂ. ಇಒ ಕೃಷ್ಣ ಸಿ., ಪಿಡಿಒಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಂಚಿನಕೆರೆ ರುಕ್ಮಾಂಗದ, ಪ್ರಕಾಶ್, ಪೂರ್ಣಿಮ, ಸೌಮ್ಯಲತಾ, ಮೊಹಮದ್ ಇಸಾಕ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.