ಮೈಸೂರು: ‘ರೇಣುಕಾಚಾರ್ಯರು ಸೇರಿದಂತೆ ಎಲ್ಲ ಮಹಾನ್ಪುರುಷರು ಸಮಾಜದ ಉನ್ನತಿಗಾಗಿ ಶ್ರಮಿಸಿದವರು. ಸಮಾನತೆ, ಮನುಕುಲದ ಉದ್ಧಾರಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟವರು. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವು ನಡೆಯಬೇಕು’ ಎಂದು ತೆಂಕಲಗೂಡು ಬೃಹನ್ಮಠದ ಪೀಠಾಧ್ಯಕ್ಷ ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಇಲ್ಲಿನ ಶ್ರೀರಾಂಪುರ 2ನೇ ಹಂತದಲ್ಲಿರುವ ವೀರಶೈವ ಸಾರ್ವಜನಿಕ ಸಂಸ್ಥೆ ವತಿಯಿಂದ ಭಾನುವಾರ ಆಯೋಜಿಸಿದ್ದ ರೇಣುಕಾಚಾರ್ಯ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

‘ಬಸವಾದಿ ಶರಣರು ವಚನ ಸಾಹಿತ್ಯದ ಮೂಲಕ ಜನರಿಗೆ ಸರಿ ಮಾರ್ಗ ತೋರಿದ್ದಾರೆ. ಮುಂದಿನ ಪೀಳಿಗೆಗೆ ಸಿದ್ಧಾಂತ ಶಿಖಾಮಣಿ, ವಚನ ಸಾಹಿತ್ಯವನ್ನು ಪರಿಚಯಿಸುವ ಅಗತ್ಯವಿದೆ. ಎಲ್ಲ ಸಮಾಜದ ಜನರನ್ನೂ ಅಪ್ಪಿಕೊಳ್ಳುವುದು, ಪ್ರೀತಿ– ವಿಶ್ವಾಸದಿಂದ ಕಾಣುವುದು ವೀರಶೈವ ಧರ್ಮದ ಮೂಲವಾಗಿದೆ’ ಎಂದರು.

‘ರೇಣುಕಾಚಾರ್ಯರ ಸರ್ವ ಶ್ರೇಷ್ಠ, ಮೌಲಿಕವಾದ ಗ್ರಂಥವಾದ ಸಿದ್ಧಾಂತ ಶಿಖಾಮಣಿ’ಯ ತತ್ವ, ಸಿದ್ಧಾಂತದ ಬೋಧನೆ ಮಾನವಕುಲ ದೈವತ್ವದೆಡೆಗೆ ಸಾಗಲು ದಾರಿದೀಪವಾಗಿದೆ. ಇಡೀ ಮನುಕುಲಕ್ಕೆ ಸಂಸ್ಕಾರ ಕೊಡುವಂತಹ ಕೆಲಸವನ್ನು ಅವರು ಮಾಡಿದ್ದಾರೆ’ ಎಂದು ಸ್ಮರಿಸಿದರು.

ವಿಧಾನಪರಿಷತ್ ಮಾಜಿ ಸದಸ್ಯ ತೋಂಟದಾರ್ಯ, ‘ಮಾನವೀಯತೆ ಇದ್ದರೆ ಜಗತ್ತು ಚೆನ್ನಾಗಿರುತ್ತದೆ ಹಾಗೂ ಸಮಾಜದಲ್ಲಿ ಶಾಂತಿ ಕಾಪಾಡಬಹುದು. ಮನಸ್ಸಿನಲ್ಲಿ ಪರಿಶುದ್ಧತೆ ಇರಬೇಕು’ ಎಂದು ಹೇಳಿದರು.

‘ರೇಣುಕಾಚಾರ್ಯರು, ಬಸವಾದಿ ಶರಣರು ಜಾತಿ–ಮತಗಳನ್ನು ನೋಡಲಿಲ್ಲ. ಧರ್ಮ ಪ್ರಚಾರ ಹಾಗೂ ಮಾನವನನ್ನು ದೇವನನ್ನಾಗಿ ಮಾಡುವುದು ಅವರ ಉದ್ದೇಶವಾಗಿತ್ತು.ಅವರು ಒಂದು ಧರ್ಮಕ್ಕೆ ಸೀಮಿತವಾಗದೆ, ಸಕಲರಿಗೂ ಲೇಸು ಬಯಸುವ ಮಾನವೀಯ ಮೌಲ್ಯಗಳನ್ನು ಸಾರಿದ್ದಾರೆ’ ಎಂದು ಹೇಳಿದರು.

ಮುಡುಕುತೊರೆಯ ತೋಪಿನ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಧನಗೂರು ಮಠದ ಮುಮ್ಮಡಿ ಷಡಕ್ಷರ ದೇಶಿಕೇಂದ್ರ ಸ್ವಾಮೀಜಿ, ಸಿಗ್ಮಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಸ್. ಜ್ಞಾನಶಂಕರ, ಮೈಮುಲ್ ಮಾಜಿ ನಿರ್ದೇಶಕ ಎಸ್.ಸಿ. ಅಶೋಕ್, ರುದ್ರಪ್ಪ, ಟಿ.ಎನ್. ಸುಧಾಕರ್, ಎಂ.ವಿ.ನಂದೀಶ್, ಎಂ.ಎನ್. ಶಶಿಕುಮಾರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-39-1937947963

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.