ಮೈಸೂರು: ‘ಒಳ ಮೀಸಲು ಹಂಚಿಕೆಯು ಯಾವುದೇ ಪರಿಶಿಷ್ಟ ಸಮುದಾಯಕ್ಕೆ ಅನ್ಯಾಯವಾಗಿಲ್ಲ. ಶೇ 17ರ ಬದಲು ಶೇ 15 ಔದ್ಯೋಗಿಕ, ಶೈಕ್ಷಣಿಕ ಹಂಚಿಕೆ ಮಾಡಿರುವುದು ಸ್ವಾಗತಾರ್ಹ ಕ್ರಮ’ ಎಂದು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಸ್. ರಾಜೇಶ್ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಚಿವ ಸಂಪುಟದ ಡಾ. ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ ಸೇರಿದಂತೆ ಎಲ್ಲ ಮುಖಂಡರ ಜೊತೆ ಕೂಲಂಕಷವಾಗಿ ಚರ್ಚಿಸಿ ಯಾರಿಗೂ ಅನ್ಯಾಯವಾಗದಂತೆ ಒಳಮೀಸಲು ಜಾರಿಗೊಳಿಸಲಾಗಿದೆ. ಪ್ರಣಾಳಿಕೆಯ ಭರವಸೆಯನ್ನು ಈಡೇರಿಸಿದೆ’ ಎಂದರು.

ಗೋಷ್ಠಿಯಲ್ಲಿ ಅಶೋಕಪುರಂ ಮಹೇಶ್, ರಾಜಶೇಖರ್, ಕುಕ್ಕರಹಳ್ಳಿ ನಂಜುಂಡಸ್ವಾಮಿ, ಅಶೋಕಪುರಂ ಪುಟ್ಟರಾಜು, ಶಿವಶಂಕರಮೂರ್ತಿ, ರಾಮು, ರವಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-39-168044556

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.