ತಿ.ನರಸೀಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮಾಜಿ ಸಂಸದ ಬಿ.ಶ್ರೀರಾಮುಲು ಅವರಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟ ಮನವಿ ಮಾಡಿದೆ.

ಈಚೆಗೆ ಮೈಸೂರಿಗೆ ಭೇಟಿ ನೀಡಿದ್ದ ಶ್ರೀರಾಮುಲು ಅವರನ್ನು ಸಂಘಟನೆಯ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ತಾಯೂರು ಪ್ರಕಾಶ್ ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದ ವೇಳೆ ಪ.ಜಾತಿಗೆ ಶೇ17, ಪಂ.ಪಂಗಡಕ್ಕೆ ಶೇ 7 ಮೀಸಲಾತಿ ಹೆಚ್ಚಳ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಆದರೆ, ಕೇಂದ್ರ ಸರ್ಕಾರ ಮೀಸಲಾತಿ ಹೆಚ್ಚಳದ ಮಸೂದೆಯನ್ನು ಶೆಡ್ಯೂಲ್ 9ಕ್ಕೆ ಸೇರಿಸಲಿಲ್ಲ.ರಾಜ್ಯದಲ್ಲಿ ಪ.ಜಾತಿ ಮತ್ತು ಪ.ಪಂಗಡದ ಜನರು ಬಹು ಸಂಖ್ಯಾತರಾಗಿದ್ದು, ಇವರನ್ನು ನಿರ್ಲಕ್ಷಿಸಿ ರಾಜ್ಯ ಸರ್ಕಾರ 54,632 ಹುದ್ದೆಗಳಿಗೆ ಹಳೇ ಮೀಸಲಾತಿಯಂತೆ ನೇಮಕಾತಿಗೆ ಮುಂದಾಗಿದೆ. ಇದು ಎರಡು ಸಮುದಾಯಗಳಿಗೂ ಮಾಡಿದ ಅನ್ಯಾಯ. ಇದರಿಂದ ಪರಿಶಿಷ್ಟ ಪಂಗಡಕ್ಕೆ 8 ಸಾವಿರ ಹುದ್ದೆಗಳು ನಷ್ಟ ಆಗಲಿವೆ. ಸರ್ಕಾರ ತುರ್ತು ಕ್ರಮವಹಿಸಿ ಮೀಸಲಾತಿ ಹೆಚ್ಚಿಸಬೇಕಿದೆ ಎಂದು ಅವರು ಹೇಳಿದ್ದಾರೆ. ಎಂ.ರಾಮಚಂದ್ರ, ಶ್ರೀನಿವಾಸ ನಾಯಕ, ಬಂಡಳ್ಳಿ ಕುಮಾರ್, ಕಳಲೆ ಮಹೇಶ್, ಮಹದೇವನಾಯಕ ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-38-2025855935

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.