ತಿ.ನರಸೀಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಭಾನುವಾರ ನಡೆದ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಜಿಲ್ಲೆಯ 343 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಶಿಲ್ಪಾ ತಿಳಿಸಿದರು.

ಪಟ್ಟಣದ ಶ್ರೀರಾಂಪುರ ಬಡಾವಣೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾತನಾಡಿದರು.

‘ಮೈಸೂರು ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ದೊಡ್ಡ ಕಾನ್ಯದ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಪಿರಿಯಾಪಟ್ಟಣ ಹಾಗೂ ತಿ. ನರಸೀಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಸಾಲಿನ ಆರನೇ ತರಗತಿ ಪ್ರವೇಶಾತಿಗಾಗಿ 526 ಮಕ್ಕಳು ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 343 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಬಾರಿ ಪ್ರವೇಶ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಮಾಡಲಾಗಿದೆ. ಜಿಲ್ಲೆಯ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು’ ಎಂದು ಅವರು ತಿಳಿಸಿದರು.

ದೊಡ್ಡಕಾನ್ಯ, ಪಿರಿಯಾಪಟ್ಟಣ ಮತ್ತು ತಿ.ನರಸೀಪುರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು.

ವಸತಿ ಶಾಲೆಗಳ ಪ್ರಾಂಶುಪಾಲರಾದ ಮಮತಾ, ಮಧುಕುಮಾರ್, ಕುಮಾರಿ, ಸ್ಥಾನಿಕ ಜಾಗೃತ ದಳ ಅಧಿಕಾರಿಗಳಾದ ಸುನೀಲ್ ಕುಮಾರ್, ಅವಿನಾಶ್ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-38-2131389438

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.